DAKSHINA KANNADA
ಪುತ್ತೂರಿನಲ್ಲಿ ಮಾರ್ಚ್ 11ರಿಂದ 13ರವರೆಗೆ ರಾಷ್ಟ್ರ ಮಟ್ಟದ ವಾಲಿಬಾಲ್ ಟೂರ್ನಿ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಪುತ್ತೂರು ತಾಲೂಕು, ವಾಲಿಬಾಲ್ ಅಸೋಸಿಯೇಷನ್ ಹಾಗೂ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳು, ವಿದ್ಯಾಗಂಗೋತ್ರಿ ಸವಣೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 11, 12, 13 (ಮೂರು ದಿನಗಳ ಕಾಲ) ರಾಷ್ಟ್ರ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ವಿದ್ಯಾರಶ್ಮಿ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಪಂದ್ಯಾಟ ಸಮಿತಿಯ ಗೌರವಧ್ಯಕ್ಷರಾದ ಕೆ. ಸೀತಾರಾಮ ರೈ ಸವಣೂರು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಾಲಿಬಾಲ್ ಪಂದ್ಯಾಟದಲ್ಲಿ ರಾಷ್ಟ್ರ ಮಟ್ಟದ ಆಯ್ದ ಯೂನಿವರ್ಸಿಟಿಯ ಪುರುಷರ ಆರು ತಂಡ ಹಾಗೂ ಆಹ್ವಾನಿತ ಮಹಿಳೆಯರ ನಾಲ್ಕು ತಂಡಗಳ ಭಾಗವಹಿಸುವಿಕೆಯೊಂದಿಗೆ ಕೇರಳ, ಕರ್ನಾಟಕ, ತಮಿಳುನಾಡು ತಂಡಗಳ ಹಣಾಹಣಿ ನಡೆಯಲಿದೆ.
ಇದೇ ಸಂದರ್ಭದಲ್ಲಿ ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಹರೇಕಳ ಹಾಜಬ್ಬ ಹಾಗೂ ಮಹಾಲಿಂಗ ನಾಯ್ಕ ವರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.