LATEST NEWS
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನಲೆ – ಬೀಚ್ ಉತ್ಸವ ಮುಂದೂಡಿಕೆ
ಬೆಂಗಳೂರು, ಡಿಸೆಂಬರ್ 27: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಏಳು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದ್ದು, ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಡಿಸೆಂಬರ್ 28 ಮತ್ತು 29 ರಂದು ಮಂಗಳೂರಿನ ತಣ್ಣೀರುಬಾವಿ ಬೀಚ್ ನಲ್ಲಿ ನಿಗದಿಯಾಗಿದ್ದ ಬೀಚ್ ಉತ್ಸವವನ್ನು ಮುಂದೂಡಲಾಗಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನಲೆ ಇಡೀ ರಾಜ್ಯದಲ್ಲಿ 7 ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಡಿಸೆಬಂರ್ 27ರಿಂದ ಜನವರಿ 1ರ ವರೆಗೆ ಶೋಕಾಚರಣೆ ಇರಲಿದ್ದು ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮ ನಡೆಸುವಂತಿಲ್ಲ ಎಂದು ಸರ್ಕಾರದ ಉಪ ಕಾರ್ಯದರ್ಶಿ ಆದೇಶದಲ್ಲಿ ತಿಳಿಸಿದ್ದಾರೆ.
ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಡಿಸೆಂಬರ್ 28 ಮತ್ತು 29 ರಂದು ಮಂಗಳೂರಿನ ತಣ್ಣೀರುಬಾವಿ ಬೀಚ್ ನಲ್ಲಿ ನಿಗದಿಯಾಗಿದ್ದ ಬೀಚ್ ಉತ್ಸವವನ್ನು ಮುಂದೂಡಲಾಗಿದೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನದ ಪ್ರಯುಕ್ತ ರಾಜ್ಯಾದ್ಯಂತ ಶೋಕಾಚರಣೆ ಇರುವುದರಿಂದ ಬೀಚ್ ಉತ್ಸವ ಮುಂದೂಡಲ್ಪಟ್ಟಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.