LATEST NEWS
ಕುಖ್ಯಾತ ನಟೋರಿಯಸ್ ರೌಡಿ ತಲ್ಲತ್ ಅರೆಸ್ಟ್

ಮಂಗಳೂರು ಸೆಪ್ಟೆಂಬರ್ 20: ಮಂಗಳೂರು ನಗರದಲ್ಲಿ ಕೊಲೆ, ಕೊಲೆಯತ್ನ, ಬೆದರಿಕೆ, ಹಫ್ತಾ ವಸೂಲಿ ಹೀಗೆ ಹತ್ತಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ರೌಡಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ನಟೋರಿಯಸ್ ರೌಡಿ ತಲ್ಲತ್ (39) ಎಂದು ಗುರುತಿಸಲಾಗಿದೆ.
ಗೋವಾ, ಮುಂಬೈನಲ್ಲಿದ್ದು ಗ್ಯಾಂಗ್ ಕಟ್ಟಿಕೊಂಡು ಅಪರಾಧ ಕೃತ್ಯ ಎಸಗುತ್ತಿದ್ದ ನಟೋರಿಯಸ್ ತಲ್ಲತ್. ಕೊಲೆ, ಕೊಲೆಯತ್ನ, ಬೆದರಿಕೆ, ಹಫ್ತಾ ವಸೂಲಿ ಸೇರಿದಂತೆ ಹತ್ತಾರು ಪ್ರಕರಣಗಳಲ್ಲಿ ಭಾಗಿ ಯಾಗಿದ್ದ. ಇನ್ನು ಇತ ಗ್ಯಾಂಗ್ ಕಟ್ಟಿಕೊಂಡು ಹವಾ ಸೃಷ್ಠಿಸಲು ಯತ್ನಿಸುತ್ತಿದ್ದ. ಇದೀಗ ಮುಂಬೈನಿಂದ ತಲ್ಲತ್, ಊರಿಗೆ ಬಂದಿದ್ದ ಮಾಹಿತಿ ಪಡೆದಿದ್ದ ಸಿಸಿಬಿ ಪೊಲೀಸರು. ನಗರದ ಕೊಟ್ಟಾರ ಎಂಬಲ್ಲಿ ಬಂಧಿಸಿದ್ದಾರೆ.

ಇನ್ನು ತಲ್ಲತ್ ವಿರುದ್ಧ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ ಹಾಗೂ ಮುಂಬೈ ಸೇರಿ ಮುಂತಾದ ಕಡೆ ಇತನ ಮೇಲೆ ಪ್ರಕರಣಗಳು ದಾಖಲಾಗಿದೆ. ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕೂಡ ಹಲ್ಲೆ ಪ್ರಕರಣ ಸೇರಿದಂತೆ 28 ಪ್ರಕರಣಗಳಲ್ಲಿ ತಲ್ಲತ್ ಭಾಗಿಯಾಗಿರುವ ಆರೋಪ ಕೇಳಿಬಂದಿತ್ತು.