Connect with us

LATEST NEWS

ಪಶ್ಚಿಮಘಟ್ಟದಲ್ಲಿ ಮತ್ತೆ ನಕ್ಸಲ್ ಚಟುವಟಿಕೆ – ಈದು ಗ್ರಾಮದಲ್ಲಿ ಕಾಣಿಸಿಕೊಂಡಿದ್ದು ಯಾರು..!!

ಕಾರ್ಕಳ ನವೆಂಬರ್ 07: ಕಾರ್ಕಳದ ಈದು ಗ್ರಾಮದಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಆರಂಭಗೊಂಡಿದೆಯಾ ಎಂಬ ಪ್ರಶ್ನೆ ಎದಿದ್ದು, ನಾಲ್ವರು ಶಸ್ತ್ರಸಜ್ಜಿತ ಯುವಕರ ತಂಡವು ಈದು ಗ್ರಾಮದ ಮುಸ್ಲಿಂ ಕಾಲೋನಿಯ ಬಳಿಯಿರುವ ಬಂಡೆಕಲ್ಲು ಸಮೀಪ ಸೋಮವಾರ ಹಾಡುಹಗಲೇ ಕಾಣಿಸಿಕೊಂಡಿದ್ದು, ಕಾಡುತ್ಪತ್ತಿ ಸಂಗ್ರಹಿಸಲು ತೆರಳಿದ ಸ್ಥಳೀಯರು ಭಯಬೀತರಾಗಿದ್ದಾರೆ.

ಸುಮಾರು 30 ರಿಂದ 40 ವರ್ಷ ವಯಸ್ಸಿನ ಯುವಕರು ತಂಡದಲ್ಲಿದ್ದು, ಹಾಡಹಗಲೇ ಕಾಣ ಸಿಕ್ಕಿದ್ದಾರೆ ಎಂಬ ಸುದ್ದಿ ಕಳೆದ ಮೂರು ದಿನಗಳಿಂದ ಹರಿದಾಡುತ್ತಿದೆ. ರಾಜ್ಯದ ಮೊದಲ ನಕ್ಸಲ್ ಎನ್‌ಕೌಂಟರ್ ನಡೆದ ಸ್ಥಳ ಈದು ಬೊಲ್ಲೊಟ್ಟುನಿಂದ ಸುಮಾರು 1ಕಿ.ಮೀ.ದೂರದಲ್ಲಿಯೇ ಈ ಬಾರಿ ನಕ್ಸಲರು ಕಾಣಸಿಗುವ ಮೂಲಕ ಸುದ್ದಿಯಾಗಿದ್ದಾರೆ.

ಕೇರಳದಲ್ಲಿ ನಕ್ಸಲ್ ಎನ್‌ಕೌಂಟರ್ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ನಕ್ಸಲ್ ವಲಸೆ ಆರಂಭಗೊಂಡಿದೆ ಎನ್ನುವ ಸಂದೇಹಗಳು ವ್ಯಕ್ತವಾಗಿದೆ. ಈ ಬಗ್ಗೆ ಸದ್ಯ ನಕ್ಸಲ್ ನಿಗ್ರಹಪಡೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಈ ನಡುವೆ ಎಎನ್ಎಫ್ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ್ದು, ಯಾವುದೇ ಕುರುಹು ಸಿಕ್ಕಿಲ್ಲ ಎಂದು ವರದಿಯಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *