Connect with us

    DAKSHINA KANNADA

    ಕುಕ್ಕೆ ಸುಬ್ರಹ್ಮಣ್ಯಕ್ಕೆ ಅಮಿತ್‌ ಶಾ ಭೇಟಿ – ತೀವ್ರಗೊಂಡ ಕೂಂಬಿಂಗ್ ಕಾರ್ಯಾಚರಣೆ

    ಕುಕ್ಕೆ ಸುಬ್ರಹ್ಮಣ್ಯಕ್ಕೆ ಅಮಿತ್‌ ಶಾ ಭೇಟಿ – ತೀವ್ರಗೊಂಡ ಕೂಂಬಿಂಗ್ ಕಾರ್ಯಾಚರಣೆ

    ಸುಳ್ಯ ಫೆಬ್ರವರಿ 19: ಶ್ರೀಕ್ಷೇತ್ರ ಸುಬ್ರಹ್ಮಣ್ಯಕ್ಕೆ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಅಮಿತ್ ಶಾ ನೇರವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಲಿದ್ದಾರೆ. ಅಲ್ಲಿಯೇ ವಾಸ್ತವ್ಯ ಹೂಡಲಿರುವ ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ ನಾಳೆ ಮುಂಜಾನೆ ಸುಬ್ರಹ್ಮಣ್ಯ. ದೇವಾಲಯದ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚುನವಾಣಾ ಪ್ರಚಾರಕ್ಕೆ ವಿದ್ಯುಕ್ತ ಚಾಲನೆ ನೀಡಲಿದ್ದಾರೆ.

    ಪಶ್ಚಿಮ ಘಟ್ಟದ ತಪ್ಪಲು ಹಾಗೂ ಸುತ್ತ ದಟ್ಟಾರಣ್ಯ ದಿಂದ ಆವೃತ್ತವಾಗಿರುವ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಮಿತ್ ಶಾ ವಾಸ್ತವ್ಯ ಹೂಡುತ್ತಿರುವ ಹಿನ್ನಲೆಯಲ್ಲಿ ಕ್ಷೇತ್ರದ ಸುತ್ತಮುತ್ತ ಭಾರಿ ಪೊಲೀಸ್ ಬಂದೋಬಸ್ತ್ ನಡೆಸಲಾಗಿದೆ. ಈ ನಡುವೆ ಅರಣ್ಯ ಪ್ರದೇಶದಲ್ಲಿ ಇತ್ತೀಚೆಗೆ ನಕ್ಸಲ್ ಚಲನವಲನ ಕಂಡು ಬಂದಿದ್ದ ಹಿನ್ನಲೆಯಲ್ಲಿ ಸುಬ್ರಹ್ಮಣ್ಯ ಸುತ್ತಮುತ್ತ ದಟ್ಟಾರಣ್ಯದಲ್ಲಿ ಪೊಲೀಸ್ ಪಡೆ ಹಾಗೂ ಎಎನ್ಎಫ್ ಪಡೆಯಿಂದ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಶಿರಾಢಿ ಪಕ್ಕದ ಅಡ್ಡಹೊಳೆ, ಹಾಗೂ ಸುಳ್ಯ ಮಡಿಕೇರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ಕಂಡು ಬಂದಿತ್ತು. ಈ ಹಿನ್ನಲೆಯಲ್ಲಿ ಕಟ್ಟೆಚ್ಚರ ವಹಿಸಿರುವ ಪೊಲೀಸರು ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply