Connect with us

    KARNATAKA

    ವಯನಾಡಿನಲ್ಲಿ ಬಹಿರಂಗವಾಗಿ ಪ್ರತ್ಯಕ್ಷವಾದ ನಕ್ಸಲರ ತಂಡ: ಸಾರ್ವಜನಿಕರಿಗೆ  ಚುನಾವಣೆ ಬಹಿಷ್ಕಾರಕ್ಕೆ ಕರೆ.!

    ವಯನಾಡು(ಕೇರಳ) : ಕೇರಳದ ವಯನಾಡು ಜಿಲ್ಲೆಯ ಕಂಬಮಲೆ ಅರಣ್ಯ ಹಾಗೂ ಮಕ್ಕಿಮಲೆ ಅರಣ್ಯದಲ್ಲಿ ನಕ್ಸಲರು ಇದೀಗ ಲೋಕಸಬಾ ಚುನಾವಣೆ ಪ್ರಯುಕ್ತ ಜಾಗೃತರಾಗಿದ್ದು ಗ್ರಾಮದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.

    ಏ.24ರ ಬೆಳಗ್ಗೆ ಆರು ಗಂಟೆ ಸುಮಾರಿಗೆ ನಾಲ್ವರು ಇರುವ ಮಾವೋವಾದಿಗಳ ತಂಡ  ತಲಪುಳ ಕಂಬಮಲಕ್ಕೆ ಆಗಮಿಸಿ ಚುನಾವಣೆ ಬಹಿಷ್ಕರಿಸುವಂತೆ ಕರೆ ನೀಡಿದ್ದಾರೆ.  ಸುಮಾರು 20 ನಿಮಿಷಗಳ ಕಾಲ ಈ ಪ್ರದೇಶದಲ್ಲಿದ್ದರು ಎಂದು ಅಲ್ಲಿನ ಸ್ಥಳೀಯರು ಹೇಳಿದ್ದಾರೆ. ಅಷ್ಟೇಅಲ್ಲದೆ ಗ್ರಾಮಸ್ಥರ ಜೊತೆ ಮಾತನಾಡಿ, ಸರ್ಕಾರವು ಕಳೆದ ನಲುವತ್ತು ವರ್ಷದಿಂದ ಕಂಬಮಲೆ ಅರಣ್ಯ ತಪ್ಪಲಿನ ಜನರ ಸಮಸ್ಯೆಯನ್ನು ಹಾಗೂ ಇಲ್ಲಿ ವಾಸವಾಗಿರುವ ಕೂಲಿ ಕಾರ್ಮಿಕರ ಕಷ್ಟ ಸರ್ಕಾರ ಅರ್ಥ ಮಾಡಿಕೊಂಡಿಲ್ಲ. ಹೀಗಾಗಿ ಎಲ್ಲರೂ ಚುನಾವಣೆ ಬಹಿಷ್ಕಾರ ಮಾಡಿ ಎಂದು ಸಾರ್ವಜನಿಕವಾಗಿ ಕರೆ ನೀಡಿದ್ದಾರೆ. ಸುಮಾರು 20 ನಿಮಿಷಗಳ ಕಾಲ ಮಾತನಾಡುತ್ತಾ ಘೋಷಣೆಗಳನ್ನು ಕೂಗಿದರು. ಬಂದ ನಾಲ್ಕು ಜನರಲ್ಲಿ ಇಬ್ಬರ ಕೈಯಲ್ಲಿ ಆಯುಧಗಳಿದ್ದವು ಎಂದು ತಿಳಿಸಿದ್ದಾರೆ. ಇನ್ನು ಸ್ಥಳೀಯರು ನೀಡಿದ ಮಾಹಿತಿಯಂತೆ ಈ ತಂಡದಲ್ಲಿ ಕೇರಳ ರಾಜ್ಯಕ್ಕೆ ಬೇಕಾಗಿರುವ ಬಹಳಷ್ಟು ವರ್ಷಗಳಿಂದ ತಲೆ ಮರೆಸಿಕೊಂಡಿರುವ ನಕ್ಸಲರಿದ್ದಾರೆ ಎನ್ನುವಂತಹ ಮಾಹಿತಿಯನ್ನು ಸ್ಥಳೀಯರು ತಿಳಿಸಿದ್ದಾರೆ. ಇಲ್ಲಿನ ಕಂಬಮಲೆ ಎಂಬ ಪ್ರದೇಶದಲ್ಲಿ ಟೀ ಎಸ್ಟೇಟ್ ಇದ್ದು, ಇಲ್ಲಿನ ಕೂಲಿ ಕಾರ್ಮಿಕರ ಜೊತೆ ನಕ್ಸಲರು ಮಾತುಕತೆ ನಡೆಸಿದ ವಿಡಿಯೋ ತುಣುಕು ಪೊಲೀಸರಿಗೆ ಲಭ್ಯವಾಗಿದೆ ಎಂದು ಹೇಳಲಾಗಿದ್ದು ಈ ಹಿನ್ನೆಲೆಯಲ್ಲಿ ಕರ್ನಾಟಕ ಕೇರಳ ಗಡಿ ಭಾಗದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *