KARNATAKA
ಶರಣಾದ ನಕ್ಸಲ್ ರ ಬಳಿ ಇತ್ತು ಎ ಕೆ – 56 ಗನ್
ಚಿಕ್ಕಮಗಳೂರು ಜನವರಿ 11: ಇತ್ತೀಚೆಗೆ ಸಿಎಂ ಸಮ್ಮುಖದಲ್ಲಿ ಶರಣಾದ ನಕ್ಸಲರ ಬಳಸುತ್ತಿದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ಅರಣ್ಯದಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ ಒಂದು ಎಕೆ 56 ಗನ್ ಸೇರಿದ್ದು, ಆತಂಕಕ್ಕೆ ಕಾರಣವಾಗಿದೆ.
ಶರಣಾದ ಆರು ಮಂದಿ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು. ಕೊಪ್ಪ ತಾಲೂಕಿನ ಮೇಗೂರು ಅರಣ್ಯದಲ್ಲಿ ಹೂತು ಇಡಲಾಗಿದ್ದ AK 56 ಗನ್, ರಿವಾಲ್ವಾರ್, ಬಂದೂಕು ಸೇರಿದಂತೆ 6 ಶಸ್ತ್ರಾಸ್ತ್ರಗಳನ್ನು ಚಿಕ್ಕಮಗಳೂರು ಪೊಲೀಸರು ಜಪ್ತಿ ಮಾಡಿದ್ದಾರೆ. ನಕ್ಸಲರು ಶರಣಾಗತಿಗೂ ಮುನ್ನ ಮೇಗೂರು ಅರಣ್ಯದಲ್ಲಿ ಅಡಗಿದ್ದರು. ಶರಣಾಗುವ ದಿನ ಮೇಗೂರು ಅರಣ್ಯದಲ್ಲೇ ಕೊನೆಯಬಾರಿಗೆ ಸಭೆ ನಡೆಸಿದ್ದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಶರಣಾಗಿದ್ದರು.
ಕೊಪ್ಪ ತಾಲ್ಲೂಕಿನ ಜಯಪುರ ವ್ಯಾಪ್ತಿಯ ಕಿತ್ತಲೆಗುಳಿ ಬಳಿಯ ಅರಣ್ಯದಲ್ಲಿ ಆರು ಬಂದೂಕು ಹಾಗೂ ಮದ್ದು ಗುಂಡು ದೊರೆತಿವೆ. ಒಂದು ಎ.ಕೆ-56, ಮೂರು 303 ರೈಫಲ್, ಹನ್ನೆರಡು ಬೋರ್ ಎಸ್‌ಬಿಬಿಎಲ್, ಒಂದು ಸ್ವದೇಶಿ ನಿರ್ಮಿತ ಬಂದೂಕು ಸಿಕ್ಕಿದೆ. 7.62 ಎಂಎಂ ಎ.ಕೆ.ಮದ್ದುಗುಂಡು-11, 303- ರೈಫಲ್ ಮದ್ದುಗುಂಡು – 133, 12 ಬೋರ್ ಕಾರ್ಟ್ರಿಡ್ರೆಸ್ – 24, ಸ್ವದೇಶಿ ನಿರ್ಮಿತ ಪಿಸ್ತೂಲ್ ಮದ್ದುಗುಂಡುಗಳು-8 ಸೇರಿ ಒಟ್ಟು 176 ಮದ್ದುಗುಂಡು, ಎ.ಕೆ-56 ಖಾಲಿ ಮ್ಯಾಗ್ವಿನ್ – 01 ದೊರೆತಿದೆ.
ಜಯಪುರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದ್ದಾರೆ. ಬುಧವಾರ ಮುಖ್ಯವಾಹಿನಿಗೆ ಬಂದ ನಕ್ಸಲರು, ಅದೇ ಕಾಡಿನಿಂದ ಹೊರ ಬಂದರು.