Connect with us

    LATEST NEWS

    ತಾಯಿಯಾದ ಬೆನ್ನಲ್ಲೇ..ಸಂಕಷ್ಟಕ್ಕೆ ಸಿಲುಕಿದ ನಯನತಾರಾ ದಂಪತಿ

    ಚೆನ್ನೈ ಅಕ್ಟೋಬರ್ 11: ಅವಳಿ ಗಂಡುಮಕ್ಕಳಿಗೆ ತಾಯಿಯಾಗುವ ಮೂಲಕ ಸಂತೋಷ ಹಂಚಿಕೊಂಡಿದ್ದ ಲೇಡಿ ಸೂಪರ್ ಸ್ಟಾರ್ ನಯನತಾರಾ ದಂಪತಿ ಗೆ ಇದೀಗ ಸಂಕಷ್ಟ ಎದುರಾಗಿದ್ದು, 4 ತಿಂಗಳ ಹಿಂದೆಯಷ್ಟೇ ಮದುವೆಯಾಗಿ ಇದೀಗ ಮಗು ಪಡೆದ ಬಗ್ಗೆ ಸರಕಾರ ತನಿಖೆಗೆ ಆದೇಶಿಸಿದೆ.


    ಬಾಡಿಗೆ ತಾಯ್ತನದ ಕುರಿತು ಸರಕಾರವು ಹಲವು ನಿಯಮಗಳನ್ನು ರೂಪಿಸಿದೆ. ಈ ನಿಯಮಗಳನ್ನು ನಯನತಾರಾ ಮತ್ತು ವಿಘ್ನೇಶ್ ಶಿವನ್ ಗಾಳಿಗೆ ತೂರಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ ತಮಿಳು ನಾಡು ಸರಕಾರ ಈ ಪ್ರಕರಣದಲ್ಲಿ ತನಿಖೆಗೆ ಆದೇಶಿಸಿದೆ. ಕಳೆದ ವರ್ಷ ಡಿಸೆಂಬರ್ ನಲ್ಲಿ ಬಾಡಿಗೆ ತಾಯ್ತನ ನಿಯಂತ್ರಣ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಬಾಡಿಗೆ ತಾಯಿ ಆರೋಗ್ಯವಾಗಿರಬೇಕು, ಆಕೆಯ ವಯಸ್ಸು 21-35ರ ಅಂತರದಲ್ಲಿ ಇರಬೇಕು. ಒಂದೇ ಸಲ ಬಾಡಿಗೆ ತಾಯಿ ಆಗಲು ಸಾಧ್ಯ ಹಾಗೂ ವಾಣಿಜ್ಯ ಬಾಡಿಗೆ ತಾಯ್ತನದ ಮೇಲೆ ನಿರ್ಬಂಧ ಹೇರಲಾಗಿದೆ.


    ಬಾಡಿಗೆ ತಾಯಿಯಿಂದ ಮಗು ಪಡೆಯಲು ಇವೆಲ್ಲ ನಿಯಮಗಳನ್ನು ಪಾಲಿಸಲೇಬೇಕಿದೆ. ಆದರೆ, ನಯನ ದಂಪತಿ ಇವುಗಳನ್ನು ಪಾಲಿಸಿಲ್ಲ ಎನ್ನುವ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ತಮಿಳು ನಾಡು ವೈದ್ಯಕೀಯ ಸೇವೆಗಳ ನಿರ್ದೇಶನಾಲಯವು ತನಿಖೆಗೆ ಆದೇಶಿಸಿದೆ. ಈ ತನಿಖೆಯು ತಮ್ಮ ಅವಳಿ ಮಕ್ಕಳಾದ ಉಯಿರ್ ಮತ್ತು ಉಳಗಂ ಜೊತೆ ಆಟವಾಡುತ್ತಿದ್ದ ದಂಪತಿಗೆ ಶಾಕ್ ಮೂಡಿಸಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *