LATEST NEWS
ಇದು ಮಹಿಳೆಯರಿಗೆ ಸಂಬಂಧಿಸಿದ ವಿಚಾರ- ಎರಡು ನಿಮಿಷದ ನೂಡಲ್ಸ್ ಥರ ಅಲ್ಲ – ಖುಷ್ಬೂ ಸುಂದರ್

ಉಡುಪಿ ಜುಲೈ 27 : ಇದು ಮಹಿಳೆಗೆ ಸಂಬಂಧಿಸಿದ ವಿಚಾರ, ಎರಡು ನಿಮಿಷದ ನೂಡಲ್ಸ್ ಥರ ಅಲ್ಲ, ವಿಧ್ಯಾರ್ಥಿನಿಯರ ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮರಾ ಇಟ್ಟಿದ್ದಾರೆ ಅನ್ನೊ ರೂಮರ್ ನಂಬಬೇಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಹೇಳಿದ್ದಾರೆ.
ಇಂದು ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿ ಆಡಳಿತ ಮಂಡಳಿ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಚರ್ಚೆ ನಡೆಸಿ ಮಾಹಿತಿಗಳನ್ನು ಪಡೆದುಕೊಂಡರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈಗಷ್ಟೇ ನಾನು ತನಿಖೆಯನ್ನು ಆರಂಭ ಮಾಡಿದ್ದೇನೆ. ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ. ಒಳಗಡೆ ಏನು ಚರ್ಚೆ ಆಯ್ತು ಎಂದು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.

ಆರೋಪಗಳು ಅನೇಕ ಇರಬಹುದು, ಅದರ ಆಧಾರದಲ್ಲಿ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ, ನಾನು ನಿಮಗೆ ಯಾವುದೇ ಬ್ರೇಕಿಂಗ್ ನ್ಯೂಸ್ ಕೊಡಲು ಇಲ್ಲಿ ಇಲ್ಲ, ಇದು ವಿದ್ಯಾರ್ಥಿನಿಯರಿಗೆ ಸಂಬಂಧಿಸಿದ ವಿಚಾರ
ಇದು ಮಹಿಳೆಯರಿಗೆ ಸಂಬಂಧಿಸಿದ ವಿಚಾರ, ಕಾಯಬೇಕು, ಇದು ಎರಡು ನಿಮಿಷದ ನೂಡಲ್ಸ್ ಥರ ಅಲ್ಲ, ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮೆರಾ ಇರಿಸಲಾಗಿದೆ ಎನ್ನುವ ರೂಮರ್ ನಂಬಬೇಡಿ. ಹರಿದಾಡುತ್ತಿರುವ ಸುಳ್ಳು ವಿಡಿಯೋಗಳನ್ನು ನಂಬಬೇಡಿ. ಇದೊಂದು ಶೈಕ್ಷಣಿಕ ಕೇಂದ್ರ ಎಲ್ಲಿ ಹಿಡನ್ ಕ್ಯಾಮೆರಾ ಇರಲು ಸಾಧ್ಯವಿಲ್ಲ ಎಂದರು. ಪೊಲೀಸರ ಹೇಳಿಕೆ ಹೊರತಾಗಿ ಜನರು ಬೇರೆ ಯಾವುದೇ ಊಹಾಪೋಹಗಳಿಗೆ ಕಿವಿ ಕೊಡಬೇಡಿ” ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಹೇಳಿದ್ದಾರೆ.