Connect with us

LATEST NEWS

ಎನ್ ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ಗವರ್ನರ್ ದ್ರೌಪದಿ ಮುರ್ಮು

ನವದೆಹಲಿ : ಭಾರೀ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಎನ್ ಡಿಎ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಪ್ರತಿಭಾರಿಯಂತೆ ಈ ಭಾರಿಯೂ ಅಚ್ಚರಿಯನ್ನು ನೀಡಿದ್ದು, ಜಾರ್ಖಂಡ್ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ.


ಒಡಿಶಾದ ಬುಡಕಟ್ಟು ಜನಾಂಗದ ಮುರ್ಮು ಅವರು ವಿರೋಧ ಪಕ್ಷದ ಅಭ್ಯರ್ಥಿಯಾಗಿ ಹೆಸರಿಸಲಾಗಿರುವ ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಚುನಾಯಿತರಾದರೆ, 64 ವರ್ಷದ ಮುರ್ಮು ಅವರು ಭಾರತದ ರಾಷ್ಟ್ರಪತಿಯಾದ ಮೊದಲ ಬುಡಕಟ್ಟು ಮಹಿಳೆಯಾಗಲಿದ್ದಾರೆ. ಒಬ್ಬ ಬುಡಕಟ್ಟು ಜನಾಂಗದ ಸ್ಥಳೀಯ ನಾಯಕಿಯಾಗಿ ತಮ್ಮ ರಾಜಕೀಯ ವೃತ್ತಿ ಜೀವನ ಆರಂಭಿಸಿ ಜಾರ್ಖಂಡ್ ನ ರಾಜ್ಯಪಾಲ ಹುದ್ದೆಗೇರಿ ಇದೀಗ ಎನ್ ಡಿಎ ಮೈತ್ರಿಕೂಟದ ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗುವವರೆಗೆ ದ್ರೌಪದಿ ಮುರ್ಮು ಅವರ ರಾಜಕೀಯ ಬದುಕು ಬಂದು ನಿಂತಿದೆ.

ತಾವು ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಎಂದು ಘೋಷಣೆಯಾಗಿ ಸುದ್ದಿವಾಹಿನಿಗಳಲ್ಲಿ ಬಂದಾಗ ನಿಜಕ್ಕೂ ಖುಷಿಯಾಯಿತು ಜೊತೆಗೆ ಅಚ್ಚರಿ ಕೂಡ ಆಯಿತು. ಒಡಿಶಾ ರಾಜ್ಯದ ಮಯೂರ್ ಭಂಜ್ ಜಿಲ್ಲೆಯ ಬುಡಕಟ್ಟು ಜನಾಂಗದ ಮಹಿಳೆಯಾಗಿ ನಾನು ದೇಶದ ಅತ್ಯುನ್ನತ ಹುದ್ದೆಗೆ ಅಭ್ಯರ್ಥಿಯಾಗುತ್ತೇನೆಂದು ನಿಜಕ್ಕೂ ಭಾವಿಸಿರಲಿಲ್ಲ ಎಂದು ನಿನ್ನೆ ರೈರಂಗ್ ಪುರದಲ್ಲಿ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. ಬಿಜೆಪಿಯ ಘೋಷವಾಕ್ಯ ‘ಸಬ್ ಕಾ ಸಾತ್, ಸಬ್ ಕಾ ವಿಶ್ವಾಸ್’ ಎಂಬ ತನ್ನ ಘೋಷವಾಕ್ಯವನ್ನು ಎನ್ ಡಿಎ ಸರ್ಕಾರ ಸಾಬೀತುಪಡಿಸಿದೆ ಎಂದು ಕೂಡ ಹೇಳಿದರು.

ಶೇಕಡಾ 2.8ರಷ್ಟು ಮತಗಳನ್ನು ಹೊಂದಿರುವ ಬಿಜೆಡಿ ಪಕ್ಷ ತಮಗೆ ಬೆಂಬಲ ನೀಡುತ್ತದೆ ಎಂಬ ವಿಶ್ವಾಸವಿದೆಯೇ ಎಂದು ಕೇಳಿದಾಗ ಒಡಿಶಾ ವಿಧಾನಸಭೆಯ ಎಲ್ಲಾ ಶಾಸಕರು ಮತ್ತು ರಾಜ್ಯದ ಸಂಸದರೆಲ್ಲರ ಬೆಂಬಲ ಗಳಿಸುವ ವಿಶ್ವಾಸ ತಮಗಿದೆ ಎಂದು ಹೇಳಿದರು.ನಾನು ಒಡಿಶಾ ಮಣ್ಣಿನ ಮಗಳು, ಹೀಗಾಗಿ ಎಲ್ಲಾ ಸದಸ್ಯರ ಬೆಂಬಲ ಕೇಳುವ ಹಕ್ಕು ತಮಗಿದೆ ಎಂದರು.

Advertisement
Click to comment

You must be logged in to post a comment Login

Leave a Reply