Connect with us

    LATEST NEWS

    4 ವರ್ಷಗಳಿಂದ ಪೊಲೀಸರಿಗೆ ಸಿಗದೆ ಎಸ್ಕೇಪ್ ಆಗಿದ್ದ ಆರೋಪಿ ಅರೆಸ್ಟ್

    ಮಂಗಳೂರು ಅಕ್ಟೋಬರ್ 23: ಮಾದಕ ವಸ್ತು ಸಾಗಾಟಕ್ಕೆ ಸಂಬಂಧಿಸಿದ ಪ್ರಕಣದಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ನಾಲ್ಕು ವರ್ಷಗಳಿಂದ ನಾಪತ್ತೆಯಾಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.


    ಆರೋಪಿಯನ್ನು ಮೊಹಮ್ಮದ್ ಸಲೀಂ (38) ಎಂದು ಗುರುತಿಸಲಾಗಿದೆ. ಆರೋಪಿ ಮೇಲೆ ಇ & ಎನ್ ಸಿ ಪಿಎಸ್ ಠಾಣಾ ಅ,ಕ್ರ 37/2019 ಕಲಂ : 8©, 20(b) (ii) (a) NDPS ACT ಪ್ರಕರಣ ದಾಖಲಾಗಿದ್ದು2019 ರಲ್ಲಿ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ತದ ನಂತರ ಈತನು ಇಲ್ಲಿಯವರೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ.

    ಕಳೆದ 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿಯನ್ನು ಮಾನ್ಯ ಸಹಾಯಕ ಪೊಲೀಸ್ ಆಯುಕ್ತರು, ಪೊಲೀಸ್ ನಿರೀಕ್ಷಕರು, ಹಾಗೂ ಉಪ- ನಿರೀಕ್ಷಕರು ಸೆನ್ ಕ್ರೈಂ ಪೊಲೀಸ್ ಠಾಣೆ ರವರ ಮಾರ್ಗದರ್ಶನದಲ್ಲಿ ದಿನಾಂಕ 22.10.2024 ರಂದು ಸೆನ್ ಕ್ರೈಂ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಪಿಸಿ 2409 ಮಾದೇವ್ ಮಾಂಗ್ ಹಾಗೂ ಪಿಸಿ 2405 ತಿಪ್ಪಾರೆಡ್ಡಿರವರು ಆರೋಪಿತನನ್ನು ಪತ್ತೆ ಮಾಡಿ ಈ ದಿನ ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಇಲ್ಲಿ ಹಾಜರುಪಡಿಸಿದ್ದಾರೆ

    Share Information
    Advertisement
    Click to comment

    You must be logged in to post a comment Login

    Leave a Reply