Connect with us

    LATEST NEWS

    ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ- ಮನೇಕಾ ಗಾಂಧೀ

    ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ- ಮನೇಕಾ ಗಾಂಧೀ

    ಉಡುಪಿ ಮಾರ್ಚ್ 5: ಮಹಿಳೆಯರ ನೋವುಗಳಿಗೆ ಸ್ಪಂದಿಸಿ ಸುರಕ್ಷತೆಯನ್ನು ಒದಗಿಸುವ ನಿಟ್ಟಿನಲ್ಲಿ ವನ್ ಸ್ಟಾಪ್ ಸೆಂಟರ್ ಆರಂಭಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ಆರಂಭಿಸಿದ್ದು, ಈವರೆಗೆ ಒಟ್ಟು 171 ಕೇಂದ್ರಗಳು ದೇಶದಲ್ಲಿ ಕಾರ್ಯನಿರ್ವಹಿಸುತ್ತಿವೆ. ಕರ್ನಾಟಕದಲ್ಲಿ ಉಡುಪಿಯಲ್ಲಿ ಪ್ರಥಮ ಕೇಂದ್ರ ಆರಂಭವಾಗಿದ್ದು,  ಮಹಿಳೆಯರ ಸುರಕ್ಷತೆಗೆ ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ಮನೇಕಾ ಗಾಂಧೀ ತಿಳಿಸಿದ್ದಾರೆ.

    ಅವರು ಸೋಮವಾರ ನಿಟ್ಟೂರಿನಲ್ಲಿ, 37.50 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ರಾಜ್ಯದ ಮೊದಲ ‘ಸಖಿ ವನ್ ಸ್ಟಾಪ್ ಸೆಂಟರ್’ ಕೇಂದ್ರದ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

    ಕರ್ನಾಟಕದಲ್ಲಿ ದಾವಣಗೆರೆ, ಧಾರವಾಡ, ಚಿತ್ರದುರ್ಗ, ಚಾಮರಾಜನಗರ, ತುಮಕೂರು, ಮೈಸೂರು, ಬಾಗಲಕೋಟೆ ಮತ್ತು ಉಡುಪಿಯಲ್ಲಿ ಈ ಕೇಂದ್ರ ತೆರೆಯಲು ಅನುಮತಿ ನೀಡಿದ್ದು, ಉಡುಪಿಯಲ್ಲಿ ಪ್ರಥಮ ಕೇಂದ್ರ ಉದ್ಘಾಟನೆಗೊಂಡಿದೆ ಎಂದು ಅವರು ಹೇಳಿದರು.

    ಕನಿಷ್ಠ ಎಂಟು ಹಾಸಿಗೆಯುಳ್ಳ ನರ್ಸ್, ಡಾಕ್ಟರ್, ಲಾಯರ್, ಪೊಲೀಸ್, ಕೌನ್ಸಿಲರ್‍ಗಳನ್ನೊಳಗೊಂಡ ಕೇಂದ್ರ ವಿದಾಗಿದ್ದು ನೊಂದ ಮಹಿಳೆಯಿರಿಗೆ ನೆರವಾಗುವ ಸಾಂತ್ವನ ಕೇಂದ್ರವಿದಾಗಿದೆ.

    ಮಹಿಳೆಯರು ತಮ್ಮ ಮೇಲೆ ದೌರ್ಜನ್ಯಗಳಾದರೆ ಸಮಾಜ ಮಹಿಳೆಯನ್ನೇ ದೋಷಿಯನ್ನಾಗಿ ಮಾಡುವ ಪರಿಸರ ನಮ್ಮದು; ಪೊಲೀಸ್ ಠಾಣೆಗೆ ದೂರು ನೀಡಲು ತೆರಳಿದರೆ ಪೊಲೀಸರು ಪ್ರಕರಣ ದಾಖಲಿಸುವಲ್ಲಿ ತೋರುವ ನಿರ್ಲಕ್ಷತೆಯಿಂದ ಅವರು ತಮ್ಮ ಮೇಲೆ ನಡೆದ ದೌರ್ಜನ್ಯವನ್ನು ಸಹಿಸಿಕೊಳ್ಳುವ ಪರಿಸ್ಥಿತಿ ಇತ್ತು. ಆಸ್ಪತ್ರೆಗಳಲ್ಲೂ ಇದೇ ಕಥೆ; ಇದಕ್ಕಾಗಿ ಕೇಂದ್ರ ಸರ್ಕಾರ ಪೊಲೀಸ್ ನೇಮಕಾತಿಯಲ್ಲಿ 33% ಮಹಿಳೆಯರಿಗೆ ಮೀಸಲು ಜಾರಿಗೆ ತಂದಿದ್ದು, 7 ರಾಜ್ಯಗಳು ಈಗಾಗಲೇ ಈ ನಿಯಮ ಅಳವಡಿಸಿಕೊಳ್ಳಲು ಮುಂದಾಗಿದೆ.

    ಮಥುರಾ, ಬೃಂದಾವನದಲ್ಲಿ ತ್ಯಜಿಸಲ್ಪಟ್ಟ ವಿಧವೆಯರಿಗಾಗಿ 1000 ಬೆಡ್‍ಗಳ ಕೇಂದ್ರ ಆರಂಭಿಸಲಾಗಿದೆ, ವ್ಯಕ್ತಿಯ ಮರಣದ ನಂತರ ಆತನ ಮರಣ ಪ್ರಮಾಣಪತ್ರದಲ್ಲಿ ಪತ್ನಿಯ ಹೆಸರನ್ನು ದಾಖಲಿಸುವುದನ್ನು ಕಡ್ಡಾಯಗೊಳಿಸಲಾಗಿದ್ದು, ಇದರಿಂದ ಪತಿಯ ನಿಧನದ ನಂತರ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ. ಮಹಿಳೆಯರಿಗೆ ಮಾತೃತ್ವ ರಜೆಯನ್ನು 6 ತಿಂಗಳ ವರೆಗೆ ವಿಸ್ತರಿಸಲಾಗಿದ್ದು, ಆಸಿಡ್ ದಾಳಿಗೆ ಒಳಗಾದ ಮಹಿಳೆಯನ್ನು ಅಂಗವಿಕಲರು ಎಂದು ಪರಿಗಣಿಸಿ, ಅಂಗವಿಕಲರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಮನೇಕಾ ಗಾಂಧೀ ಹೇಳಿದರು.

    ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಒಂದೇ ಸೂರಿನಡೆ ಎಲ್ಲಾ ಸೌಲಭ್ಯ ನೀಡುವ ಉದ್ದೇಶದಿಂದ ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, ಈ ಸೆಂಟರ್ ನಲ್ಲಿ ಮಹಿಳೆಯರಿಗೆ ಸಹಾಯ ಮಾಡಲು, ತಲಾ ಒಬ್ಬರು ಆಪ್ತ ಸಮಾಲೋಚಕರು, ವೈದ್ಯರು, ವಕೀಲರು, ಪೊಲೀಸ್ ಇರಲಿದ್ದು, ಈ ಕೇಂದ್ರದಲ್ಲಿ ತಾತ್ಕಾಲಿಕವಾಗಿ ತಂಗಲು ಸಹ ವ್ಯವಸ್ಥೆಯಿದೆ ಎಂದು ಹೇಳಿದರು.

    Share Information
    Advertisement
    Click to comment

    You must be logged in to post a comment Login

    Leave a Reply