Connect with us

    KARNATAKA

    ನೇಹಾ ಹತ್ಯೆ ಪ್ರಕರಣ ಸಿಐಡಿಗೆ, ತ್ವರಿತ ವಿಚಾರಣೆಗಾಗಿ ವಿಶೇಷ ಕೋರ್ಟ್ ಸ್ಥಾಪನೆ : ಸಿಎಂ ಸಿದ್ದರಾಮಯ್ಯ..!!

    ಶಿವಮೊಗ್ಗ: ಹುಬ್ಬಳ್ಳಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಜೊತೆಗೆ ಪ್ರಕರಣದ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗುವುದು ಎಂದು ಹೇಳಿದ್ಧಾರೆ.


    ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ನೇಹಾ ಅವರ ಮನೆಗೆ ಹೋಗಲು ಆಗಿಲ್ಲ. ನಮ್ಮ ಸಚಿವರು, ಕಾರ್ಯಕರ್ತರು ಅವರ ಮನೆಗೆ ಹೋಗಿದ್ದಾರೆ ಎಂದರು.
    “ನಾವು ಪ್ರಕರಣವನ್ನು ಸಿಐಡಿಗೆ ನೀಡಲು ನಿರ್ಧರಿಸಿದ್ದೇವೆ. ಅದಕ್ಕಾಗಿ ನಾವು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುತ್ತೇವೆ. ಕಾಲಮಿತಿಯಲ್ಲಿ ಚಾರ್ಜ್ ಶೀಟ್ ಸಲ್ಲಿಸಿ ಪ್ರಕರಣವನ್ನು ಇತ್ಯರ್ಥಗೊಳಿಸಬೇಕು, ಆದ್ದರಿಂದ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು. ಇದೇ ರೀತಿಯ ಪ್ರತಿಭಟನೆಗಳು ವಿವಿಧ ಸ್ಥಳಗಳಲ್ಲಿ ವರದಿಯಾಗಿವೆ. ಕಾಂಗ್ರೆಸ್ ಆಡಳಿತದಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗಿವೆ ಎಂದು ಹೇಳಿರುವ ಮುಖ್ಯಮಂತ್ರಿ, 2023ರಲ್ಲಿ ಕಾಂಗ್ರೆಸ್ ಆಡಳಿತ 1,295 ಅಪರಾಧ ಪ್ರಕರಣಗಳು ನಡೆದಿದ್ದವು. 2019-2022 ರಿಂದ ನಾಲ್ಕು ವರ್ಷಗಳ ಬಿಜೆಪಿ ಅವಧಿಯಲ್ಲಿ ಕ್ರಮವಾಗಿ 1,300, 1,318, 1,342 ಮತ್ತು 1,370 ನಡೆದಿದ್ದವು ಎಂದು ಅಂಕಿ ಅಂಶ ನೀಡಿದ್ದಾರೆ. “ನಮ್ಮ ಅಧಿಕಾರಾವಧಿಯಲ್ಲಿ ನಾವು ಎಲ್ಲರಿಗೂ ರಕ್ಷಣೆ ನೀಡುತ್ತೇವೆ. ನೇಹಾ ಹತ್ಯೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ನಾವು ವಿಶೇಷ ನ್ಯಾಯಾಲಯವನ್ನು ರಚಿಸುತ್ತಿದ್ದೇವೆ ಮತ್ತು ಸಿಐಡಿಗೆ ತನಿಖೆ ಒಪ್ಪಿಸುತ್ತೇವೆ. ಇನ್ನೂ ನಾಲ್ವರು ಶಂಕಿತರು ಭಾಗಿಯಾಗಿರುವ ಬಗ್ಗೆ ನೇಹಾ ತಂದೆ ಮಾತನಾಡಿದ್ದಾರೆ, ನಾನು ಇದರ ಬಗ್ಗೆಯೂ ತನಿಖೆ ನಡೆಸುವಂತೆ ಸೂಚಿಸಿದ್ದೇನೆ ಎಂದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *