DAKSHINA KANNADA
ನೆಲ್ಯಾಡಿ – ಕಾರು ಬೈಕ್ ನಡುವೆ ಭೀಕರ ರಸ್ತೆ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ನೆಲ್ಯಾಡಿ ಜೂನ್ 05: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ನಡೆದಿದೆ.
ಮೃತರನ್ನು ಬೈಕ್ ಸವಾರ ಬೆಳ್ತಂಗಡಿ ತಾಲೂಕು ರೆಖ್ಯ ಗ್ರಾಮದ ನಾಳಾಲು ನಿವಾಸಿ ರವಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಮಹೀಂದ್ರಾ ಎಕ್ಸ್’ಯುವಿ ಕಾರು ಹಾಗೂ ಬೈಕ್ ನಡುವೆ ನೇಲ್ಯಡ್ಕ ಸಮೀಪ ಅಪಘಾತ ಸಂಭವಿಸಿದೆ , ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
You must be logged in to post a comment Login