Connect with us

    BANTWAL

    ನೇತ್ರಾವತಿ ಸೇತುವೆ ಬಳಿ ಆತ್ಮಹತ್ಯೆಗೆ ಯತ್ನಿಸಿದ ವಿಟ್ಲ ಪಟ್ಟಣ ಪಂಚಾಯತ್ ಸಿಬ್ಬಂದಿ

    ಬಂಟ್ವಾಳ ಜನವರಿ 20 :ಡೆತ್ ನೋಟ್ ಬರೆದಿಟ್ಟು ವಿಟ್ಲ ಪಟ್ಟಣ ಪಂಚಾಯತ್ ಸಿಬ್ಬಂದಿಯೊಬ್ಬರು ಬಂಟ್ವಾಳ ನೇತ್ರಾವತಿ ಸೇತುವೆಯ ಬಳಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು ಸ್ಥಳೀಯರು ಅವರನ್ನು ಸೇತುವೆಯ ಬಳಿ ಕಂಡು ತಡೆದು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.


    ವಿಟ್ಲಪಟ್ಟಣ ಪಂಚಾಯತ್ ನಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ರಾಜೇಶ್ ಎಂಬವರು ಆತ್ಮಹತ್ಯೆಗೆ ಯತ್ನಿಸಿದವರು.


    ಇಂದು ಬೆಳಗ್ಗೆ ರಾಜೇಶ್ ಕೆಲವರಿಗೆ ವಾಟ್ಸಾಪ್ ನಲ್ಲಿ ವಾಯ್ಸ್ ಮೆಸೇಜ್ ಕಳುಹಿಸಿದ್ದು ನನ್ನ ಬಗ್ಗೆ ಸುಳ್ಳು ಆರೋಪ ಮಾಡಿದ್ದು ಇದರಿಂದ ಮಾನಸಿಕವಾಗಿ ಮನನೊಂದಿದ್ದೇನೆ. ಆದುದರಿಂದ ನಾನು ಆತ್ಮಹತ್ಯೆ ಮಾಡುತ್ತೇನೆ ಎಂದು ಸಂದೇಶ ಕಳುಹಿಸಿದ್ದರು, ಅಲ್ಲದೆ ಬಳಿಕ ಡೆತ್ ನೋ ಟು ಬರೆದಿದ್ದು ಅದರಲ್ಲಿಯೂ ಕೂಡಾ ಇದೇ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *