BANTWAL
ನೇತ್ರಾವತಿ ನದಿಗೆ ಈಜಲು ತೆರಳಿದ್ದ ಬಾಲಕ ನೀರುಪಾಲು
ಬಂಟ್ವಾಳ ಎಪ್ರಿಲ್ 21: ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ನಡೆದಿದೆ.
ಮೃತ ಬಾಲಕನನ್ನು ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ಎಂದು ಗುರುತಿಸಲಾಗಿದೆ. ಕೆಮ್ಮನ್ ಪಳಿಕೆ ಶಾಲೆಯಲ್ಲಿ ಕಲಿಯುತ್ತಿದ್ದ ಈತ 7 ನೇ ತರಗತಿ ತೇರ್ಗಡೆ ಹೊಂದಿದ್ದ.ನೆಚ್ಚಬೆಟ್ಟು ತನ್ನ ಮನೆ ಸಮೀಪದ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿಂದ ಸ್ನೇಹಿತರ ಜೊತೆಗೆ ಪಕ್ಕದ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದು ಆ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ನದಿ ದಡದಿಂದ ಬೊಬ್ಬೆ ಕೇಳಿ ಬಂದ ಹಿನ್ನಲೆಯಲ್ಲಿ ಹತ್ತಿರದಲ್ಲೇ ಕ್ರಿಕೆಟ್ ಆಟವಾಡುತ್ತಿದ್ದ ಯುವಕರು ಸುಹೈಲ್ ನನ್ನು ನದಿಯಿಂದ ಮೇಲಕ್ಕೆತ್ತಿದ್ದು ಅದಾಗಲೇ ಆತ ಮೃತಪಟ್ಟಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.