LATEST NEWS
ನೇತ್ರಾವತಿ ಸೇತುವೆಯಲ್ಲಿ ಆತ್ಮಹತ್ಯೆಗೈದಿದ್ದ ವ್ಯಕ್ತಿ ಮೃತದೇಹ ಪತ್ತೆ

ಮಂಗಳೂರು ಜುಲೈ 08: ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ನಗರದ ಕಲ್ಲಾಪು ಬಳಿಯ ನೇತ್ರಾವತಿ ಸೇತುವೆಯಿಂದ ಜುಲೈ 4 ರಂದು ನದಿಗೆ ಜಿಗಿದಿದ್ದ ಯುವಕನ ಮೃತ ದೇಹ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಹರೇಕಳ ಗ್ರಾಮದ ಕಿಶೋರ್ ಅಡ್ಯಂತಾಯ(37) ಎಂದು ಗುರುತಿಸಲಾಗಿದೆ. ಕೊಳೆತ ಸ್ಥಿತಿಯಲ್ಲಿ ನೇತ್ರಾವತಿ ನದಿ ತೀರದಲ್ಲಿ ಮೃತದೇಹ ಪತ್ತೆಯಾಗಿದೆ.
ಕಳೆದ ಶನಿವಾರ ಮಧ್ಯಾಹ್ನದ ಸಂದರ್ಭ ಛತ್ರಿಯನ್ನು ಸೇತುವೆ ಮೇಲೆ ಇರಿಸಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಸೇತುವೆ ಮೇಲೆ ಸಂಚರಿಸುವ ವಾಹನ ಸವಾರರು ನೋಡಿದ್ದಾರೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಂಕನಾಡಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಯುವಕನ ಸುಳಿವು ಲಭ್ಯವಾಗಿರಲಿಲ್ಲ.
