Connect with us

    DAKSHINA KANNADA

    ಕೊಂಡಾಣ ಕ್ಷೇತ್ರದಲ್ಲಿ ನಿರ್ಮಾಣ ಹಂತದ ಭಂಡಾರ ಮನೆ ಜೆಸಿಬಿ ಮೂಲಕ ನೆಲಸಮ – ಮೂವರು ಅರೆಸ್ಟ್

    ಉಳ್ಳಾಲ ಮಾರ್ಚ್ 03 :ಕೊಂಡಾಣ ಕ್ಷೇತ್ರದಲ್ಲಿ ನಿರ್ಮಾಣವಾಗುತ್ತಿದ್ದ ಭಂಡಾರಮನೆಯನ್ನು ಕಿಡಿಗೇಡಿಗಳು ಏಕಾಏಕಿ ನೆಲಸಮಾಡಿದ ಘಟನೆ ನಡೆದಿದೆ. ದೈವಸ್ಥಾನದ ಆಡಳಿತ ಮಂಡಳಿ ವಿಚಾರವಾಗಿ ಎರಡು ಬಣಗಳ ಮಧ್ಯೆ ವಿವಾದ ಉಂಟಾಗಿ ಭಂಡಾರದ ಮನೆ ಧ್ವಂಸ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತರನ್ನು ಮುತ್ತಣ್ಣ ಶೆಟ್ಟಿ, ಧೀರಜ್‌ ಮತ್ತು ಶಿವರಾಜ್‌ ಎಂದು ಗುರುತಿಸಲಾಗಿದೆ.


    ಕೊಂಡಾಣ ಕ್ಷೇತ್ರದ ಪಿಲಿಚಾಮುಂಡಿ , ಬಂಟ, ವೈದ್ಯನಾಥ ದೇವಸ್ಥಾನಕ್ಕೆ ಸೇರಿದ ನೂತನವಾಗಿ ನಿರ್ಮಾಣ ಮಾಡಲಾಗುತ್ತಿದ್ದ ಭಂಡಾರ ಮನೆಯನ್ನು ಧ್ವಂಸಗೊಳಿಸಲಾಗಿದೆ. ದೈವಸ್ಥಾನದ ಆಡಳಿತ ಮಂಡಳಿ ವಿಚಾರವಾಗಿ ಎರಡು ಬಣಗಳ ಮಧ್ಯೆ ವಿವಾದ ಉಂಟಾಗಿ ಭಂಡಾರದ ಮನೆ ಧ್ವಂಸ ಮಾಡಿರುವ ಶಂಕೆ ವ್ಯಕ್ತವಾಗಿದೆ.


    ರಾಜ್ಯ ಧಾರ್ಮಿಕ ದತ್ತಿ ಇಲಾಖೆಗೆ ಸೇರುವ ಕೊಂಡಾಣ ದೇವಸ್ಥಾನದ ಭಂಡಾರ ಮನೆಯನ್ನು ಮುಜರಾಯಿ ಇಲಾಖೆಗೆ ಸೇರಿಸಲು ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರ್ ಸೇರಿದಂತೆ ಹಲವರು ಯತ್ನಿಸಿದ್ದರು. ಆದರೆ ಇದಕ್ಕೆ ಖಾಸಗಿ ಭಂಡಾರ ಮನೆಯವರು ಸಮ್ಮತಿ ನೀಡಿರಲಿಲ್ಲ. ಸಮಿತಿಯು ದೈವಗಳಿಗೆ ಬೇರೆ ಭಂಡಾರ ಮನೆ ನಿರ್ಮಾಣಕ್ಕೆ ಮುಂದಾಗಿತ್ತು.

    ದೇಗುಲದ ಪಕ್ಕದ ಜಾಗದಲ್ಲಿ ಜನವರಿ 8 ರಂದು ಕೃಷ್ಣ ಶೆಟ್ಟಿ ನೇತ್ವತ್ವದಲ್ಲಿ ಭಂಡಾರ ಮನೆಯ ಶಿಲಾನ್ಯಾಸ ಮಾಡಲಾಗಿತ್ತು. ದಾನಿಗಳ ದೇಣಿಗೆಯಿಂದ ಭಂಡಾರ ಮನೆಯ ಕಾಮಗಾರಿ ಪೂರ್ಣಗೊಂಡಿತ್ತು. ಈ ಮಧ್ಯೆ ಸಮಿತಿಯ ಅವಧಿ ಮುಗಿದ ಹಿನ್ನೆಲೆಯಲ್ಲಿ ಸಮಿತಿ ಅಧ್ಯಕ್ಷ ಕೃಷ್ಣ ಶೆಟ್ಟಿ ಅವರು ಎರಡು ದಿನದ ಹಿಂದಷ್ಟೇ ಅಧಿಕಾರ ಹಸ್ತಾಂತರಿಸಿದ್ದರು. ಕೃಷ್ಣ ಶೆಟ್ಟಿ ಅಧ್ಯಕ್ಷ ಸ್ಥಾನದಿಂದ ಇಳಿಯುತ್ತಿದ್ದಂತೆ ಭಂಡಾರ ಮನೆ ಧ್ವಂಸಗೊಂಡಿದೆ.

    Share Information
    Advertisement
    Click to comment

    You must be logged in to post a comment Login

    Leave a Reply