LATEST NEWS
ಮತ್ತೆ ಅಧಿಕಾರ ಸ್ವೀಕರಿಸಿದ ಮಂಗಳೂರು ಪೊಲೀಸ್ ಆಯುಕ್ತ ಟಿ.ಆರ್ ಸುರೇಶ್

ಮತ್ತೆ ಅಧಿಕಾರ ಸ್ವೀಕರಿಸಿದ ಮಂಗಳೂರು ಪೊಲೀಸ್ ಆಯುಕ್ತ ಟಿ.ಆರ್ ಸುರೇಶ್
ಮಂಗಳೂರು ಜೂನ್ 18: ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಟಿ.ಆರ್ ಸುರೇಶ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾಗಿ ಮತ್ತೆ ಮರು ನೇಮಕ ಮಾಡಲಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಆಗಿನ ಮಂಗಳೂರು ಪೊಲೀಸ್ ಆಯುಕ್ತ ಟಿ.ಆರ್ ಸುರೇಶ್ ಅವರನ್ನು ವರ್ಗಾವಣೆ ಮಾಡಿ ಅವರ ಜಾಗಕ್ಕೆ ವಿಪುಲ್ ಕುಮಾರ್ ಅವರನ್ನು ನೇಮಕ ಮಾಡಲಾಗಿತ್ತು. ಈಗ ಚುನಾವಣೆ ಮುಗಿದು ಸರಕಾರ ರಚನೆಯಾದ ಹಿನ್ನಲೆಯಲ್ಲಿ ಅಧಿಕಾರಿಗಳನ್ನು ಮತ್ತೆ ಸ್ವಸ್ಥಾನಕ್ಕೆ ನೇಮಕ ಮಾಡಲಾಗುತ್ತಿದೆ.

ನಿರ್ಗಮನ ಪೊಲೀಸ್ ಕಮೀಷನರ್ ವಿಪುಲ್ ಕುಮಾರ್ ಅವರು ಇಂದು ನೂತನ ಪೊಲೀಸ್ ಆಯುಕ್ತ ಟಿ.ಆರ್ ಸುರೇಶ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಿರ್ಗಮಿತ ಪೊಲೀಸ್ ಕಮಿಷನರ್ ವಿಫುಲ್ ಕುಮಾರ್ ಮಂಗಳೂರಲ್ಲಿ ಕೋಮುದ್ವೇಷ ನಡೆಯುತ್ತದೆ ಎಂಬ ಕೆಟ್ಟ ಮಾತಿದೆ. ಆದರೆ ಮಂಗಳೂರಿನ ಜನರು ಶಾಂತಿ ಬಯಸುತ್ತಾರೆ, ಕೆಲವು ಸಮಾಜದ್ರೋಹಿಗಳಿಂದ ಮಂಗಳೂರಿಗೆ ಕೆಟ್ಟ ಹೆಸರು ಬಂದಿದೆ. ಇಂತಹ ಸಮಾಜದ್ರೋಹಿಗಳ ವಿರುದ್ದ ಕ್ರಮಕೈಗೊಳ್ಳಲು ಮಂಗಳೂರು ಪೊಲೀಸರು ಸಮರ್ಥರಿದ್ದಾರೆ ಎಂದು ಹೇಳಿದರು.