Connect with us

    LATEST NEWS

    6 ತಿಂಗಳಲ್ಲೇ ಮಂಗಳೂರಿಗೆ ಹೊಸ ಪೊಲೀಸ್ ಕಮೀಷನರ್

    ಮಂಗಳೂರು ಜನವರಿ 1: ಮಂಗಳೂರಿಗೆ 6 ತಿಂಗಳಲ್ಲೇ ಹೊಸ ಪೊಲೀಸ್ ಕಮೀಷನರ್ ನೇಮಕವಾಗಿದೆ. ಜೂನ್ 29ರಂದು ಅಧಿಕಾರ ವಹಿಸಿಕೊಂಡಿದ್ದ ವಿಕಾಶ್ ಅವರನ್ನು 6 ತಿಂಗಳಲ್ಲೇ ವರ್ಗಾಯಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಹೊಸ ವರ್ಷಕ್ಕೆ ಮಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಎನ್.ಶಶಿಕುಮಾರ್ ನೇಮಕಗೊಂಡಿದ್ದಾರೆ. ಮಂಗಳೂರು ಪೊಲೀಸ್ ಆಯುಕ್ತರಾಗಿದ್ದ ವಿಕಾಶ್ ಕುಮಾರ್ ವಿಕಾಶ್ ಅವರನ್ನು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಡಿಐಜಿ ಆಗಿ ವರ್ಗಾಯಿಸಲಾಗಿದೆ.


    ಇನ್ನು ಕೇವಲ 6 ತಿಂಗಳಲ್ಲಿ ನಗರದ ಪೊಲೀಸ್ ಆಯುಕ್ತರ ವರ್ಗಾವಣೆಯಾಗಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚೆಗೆ ಕರಾವಳಿಯಲ್ಲಿ ನಡೆಯುತ್ತಿರುವ ಕೊಲೆ, ಹಲ್ಲೆ ಪ್ರಕರಣಗಳು ಹೆಚ್ಚಾಗಿದ್ದು, ಪೊಲೀಸ್ ಆಯುಕ್ತರಾಗಿದ್ದ ವಿಕಾಶ್ ಕುಮಾರ್ ಅವರ ಕಾರ್ಯವೈಖರಿ ಬಗ್ಗೆ ಮಂಗಳೂರಿನ ಸಂಸದ, ಶಾಸಕರ ವಲಯದಲ್ಲಿ ತೀವ್ರ ಅಸಮಾಧಾನವಿದ್ದುದು ವರ್ಗಾವಣೆಗೆ ಕಾರಣ ಎನ್ನಲಾಗಿದೆ.

    ಜನವರಿ 1ರಿಂದಲೇ ಅನ್ವಯವಾಗುವಂತೆ ಹೊಸ ವರ್ಗಾವಣೆ ನಡೆದಿದೆ. ಚಿತ್ರದುರ್ಗ ಮೂಲದ ಎನ್.ಶಶಿಕುಮಾರ್ 2007ನೇ ಬ್ಯಾಚ್‌ನ ಅಧಿಕಾರಿ. ಬಿಎಸ್ಸಿ ಕೃಷಿ ಪದವೀಧರರು. ಈ ಮೊದಲು ಬೆಂಗಳೂರು ಉತ್ತರ ಡಿಸಿಪಿ ಆಗಿ, ವೈರ್‌ಲೆಸ್ ವಿಭಾಗದ ಎಸ್‌ಪಿ ಆಗಿದ್ದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *