Connect with us

LATEST NEWS

ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ

ಮಂಗಳೂರು ಮೇ 31: ಸರಣಿ ಹತ್ಯೆಗಳಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ದಕ್ಷಿಣಕನ್ನಡ ಜಿಲ್ಲೆಗೆ ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.
ನಿರ್ಗಮನ ಆಯುಕ್ತ ಅನುಪಮ್ ಅಗರ್‌ವಾಲ್ ಅವರಿಂದ ಅಧಿಕಾರ ಸ್ವೀಕರಿಸಿರುವ ಸುಧೀರ್ ಕುಮಾರ್ ರೆಡ್ಡಿ 2010ರ ಬ್ಯಾಚ್‌ನ ಅಧಿಕಾರಿಯಾಗಿದ್ದರು. ಗುಪ್ತಚರ ಇಲಾಖೆಯ ಡಿಐಜಿ ಆಗಿ ಕಾರ್ಯನಿರ್ವಹಿಸಿದ್ದರು. ಆಂಧ್ರಪ್ರದೇಶದ ಗುಂಟೂರು ಮೂಲದ ಸುಧೀರ್ ಕುಮಾರ್ ರೆಡ್ಡಿ 2017-18ರಲ್ಲಿ ದ.ಕ.ಜಿಲ್ಲಾ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು.


ಸುಧೀರ್ ಕುಮಾರ್ ರೆಡ್ಡಿ ಈ ಹಿಂದೆ 2018ರಲ್ಲಿ ದಕ್ಷಿಣ ಕನ್ನಡ ಎಸ್ಪಿಯಾಗಿ ಐದು ತಿಂಗಳು ಕರ್ತವ್ಯ ನಿರ್ವಹಿಸಿದ್ದರು. ಮರಳು ಮಾಫಿಯಾ ಒತ್ತಡದಿಂದಾಗಿ ಅವರನ್ನು ಅರ್ಧದಲ್ಲಿಯೇ ಬೆಳಗಾವಿಗೆ ವರ್ಗಾವಣೆ ಮಾಡಲಾಗಿತ್ತು. ಆನಂತರ, ಎರಡು ವರ್ಷ ಕರ್ತವ್ಯ ನಿರ್ವಹಿಸಿ ಕರ್ನಾಟಕದ ವ್ಯವಸ್ಥೆಯ ಬಗ್ಗೆ ರೋಸಿ ಹೋಗಿ, 2020ರಲ್ಲಿ ಆಂಧ್ರ ಪ್ರದೇಶಕ್ಕೆ ಡೆಪ್ಯುಟೇಶನ್ ಮೇಲೆ ಹೋಗಿದ್ದರು. ಡೆಪ್ಯುಟೇಶನ್ ಕರ್ತವ್ಯ ಮೂರು ವರ್ಷಕ್ಕೆ ಸೀಮಿತ ಆಗಿರುವುದರಿಂದ ಅಲ್ಲಿ ಒಂದೊಂದು ವರ್ಷ ಮೂರು ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *