Connect with us

DAKSHINA KANNADA

ಕ್ರಿಮಿನಲ್ ಗಳಿಗೆ ವಾರ್ನಿಂಗ್ ಕೊಟ್ಟು ದಕ್ಷಿಣಕನ್ನಡ ಜಿಲ್ಲಾ ಎಸ್ಪಿ ಆಗಿ ಅಧಿಕಾರ ಸ್ವೀಕರಿಸಿ ಡಾ. ಅರುಣ್ ಕೆ

ಪುತ್ತೂರು ಮೇ 30: ಸರಣಿ ಹತ್ಯೆಗಳ ನಡುವೆ ರಾಜ್ಯ ಸರಕಾರ ದಕ್ಷಿಣಕನ್ನಡ ಜಿಲ್ಲಾ ಎಸ್ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಿ ಅವರ ಜಾಗಕ್ಕೆ ಉಡುಪಿ ಎಸ್ಪಿ ಡಾ. ಅರುಣ್ ಅವರನ್ನು ನೇಮಕಗೊಳಿಸಿತ್ತು. ಇಂದು ಡಾ. ಅರುಣ್ ಅವರು ದಕ್ಷಿಣಕನ್ನಡ ಜಿಲ್ಲಾ ಎಸ್ಪಿ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.


ಸರ್ಕಾರ ಹಾಗೂ ಪ್ರಧಾನ ಕಚೇರಿಯ ಆದೇಶದಂತೆ ಈ ದಿನ ದಿನಾಂಕ 30-05-2025 ರಂದು ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಹುದ್ದೆಯ ಪ್ರಭಾರವನ್ನು ವಹಿಸಿಕೊಂಡಿರುತ್ತೇನೆ.
ಕಾನೂನು ಸುವ್ಯವಸ್ಥೆ ಕಾಪಾಡುವುದು ಜೊತೆಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಮತೀಯ ಪ್ರಕರಣ, ನೈತಿಕ ಪೊಲೀಸ್ ಗಿರಿ(Moral Policing) ಪ್ರಕರಣಗಳ ಬಗ್ಗೆಯೂ ಗಂಭೀರವಾಗಿ ಪರಿಗಣಿಸಲಾಗುವುದು. ಅದೇ ರೀತಿ ರೌಡಿ ಶೀಟರ್ ಗಳ ಚನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು. ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.

ಸಾರ್ವಜನಿಕರಲ್ಲಿ ಯಾವುದೇ ಮಾಹಿತಿಗಳಿದ್ದಲ್ಲಿ ನೇರವಾಗಿ ಮುಕ್ತವಾಗಿ ನನ್ನ ಮೊಬೈಲ್ ಸಂಖ್ಯೆ: 9480805301 ಅಥವಾ ಕಛೇರಿಗೆ ಸಂಖ್ಯೆ: 0824-2220503ಗೆ ಮಾಹಿತಿ ನೀಡಬಹುದು ಎಂದು ತಿಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *