LATEST NEWS
ಮದುವೆಯಾಗಿ 15 ದಿನ ಕಳೆಯುವಷ್ಟರಲ್ಲೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ

ಕೊಣಾಜೆ ಸೆಪ್ಟೆಂಬರ್ 5: ಮದುವೆಯಾಗಿ 15 ದಿನಗಳು ಕಳೆಯುವಷ್ಟರಲ್ಲೇ ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತರನ್ನು ಅಂಬ್ಲಮೊಗರು ಗ್ರಾಮದ ಕೋಟ್ರಗುತ್ತುವಿನ ರಶ್ಮಿ ವಿಶ್ವಕರ್ಮ (24) ಎಂಬ ಯುವತಿ. ಗಂಜಿಮಠ ಮೂಲದ ಹಾಗೂ ದುಬೈಯಲ್ಲಿ ಇಂಜಿನಿಯರ್ ಆಗಿರುವ ಯುವಕನ ಜೊತೆ ಆಗಸ್ಟ್ 21ರಂದು ವಿವಾಹ ನೆರವೇರಿತ್ತು. ಸೆಪ್ಟೆಂಬರ್ 3ರಂದು ರಶ್ಮಿಯ ಅಕ್ಕನ ಮನೆಯಲ್ಲಿ ಔತನ ಕೂಟ ಏರ್ಪಡಿಸಲಾಗಿತ್ತು. ಅದೇ ದಿನ ರಶ್ಮಿ ವಿಷ ಸೇವಿಸಿದ್ದರು ಎನ್ನಲಾಗಿದೆ. ಬಳಿಕ ಆಕೆಯನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಆಕೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕೊಣಾಜೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.