LATEST NEWS
ಉಡುಪಿ – ಹೊಟೇಲ್ ರೆಸ್ಟೋರೆಂಟ್ ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆಗೆ ಅವಕಾಶ ಇಲ್ಲ
ಉಡುಪಿ ಡಿಸೆಂಬರ್ 27: ಉಡುಪಿ ಜಿಲ್ಲೆಯಲ್ಲಿ ಯಾವುದೇ ಹೊಟೇಲ್ ಅಥವಾ ರಸ್ಟೋರೆಂಟ್ ಗಳಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿದ ಅವರು ರಾಜ್ಯ ಸರ್ಕಾರದ ಆದೇಶದ ಪ್ರಕಾರ ಹೊಸ ವರ್ಷದ ಆಚರಣೆಯ ಸಮಯದಲ್ಲಿ ಕೂಡ ಎಲ್ಲಾ ರೀತಿಯ ಕೊರೊನಾ ನಿಯಮಗಳನ್ನು ಪಾಲಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಸರ್ಕಾರ ಹೊರಡಿಸಿದ ವಿಶೇಷ ಮಾರ್ಗಸೂಚಿಗಳು ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ನಾಲ್ಕು ದಿನಗಳವರೆಗೆ ಅನ್ವಯಿಸುತ್ತವೆ ಎಂದರು.
ಈ ಸಮಯದಲ್ಲಿ ಯಾವುದೇ ಪಬ್, ರೆಸ್ಟೋರೆಂಟ್, ಹೋಟೆಲ್, ಕೆಫೆಗಳು ಯಾವುದೇ ವಿಶೇಷ ಕೊಡುಗೆಗಳನ್ನು ಸಾರ್ವಜನಿಕರಿಗೆ ನೀಡಲು ಅನುಮತಿಸಲಾಗುವುದಿಲ್ಲ. ಇತರ ದಿನಗಳಲ್ಲಿ ಹೇಗೆ ಸೇವೆ ಸಲ್ಲಿಸುತ್ತಾರೋ ಹಾಗೆ ಮಾತ್ರ ಅವರಿಗೆ ಸೇವೆ ಸಲ್ಲಿಸಲು ಅವಕಾಶವಿದೆ. ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷವನ್ನು ಆಚರಿಸುವುದನ್ನು ಕೂಡ ಈ ಸಮಯದಲ್ಲಿ ನಿಷೇದಿಸಲಾಗಿದೆ. ಸಾರ್ವಜನಿಕರು ತಮ್ಮ ತಮ್ಮ ಮನೆಗಲ್ಲಿ ಹೊಸ ವರ್ಷ ಸಂಭ್ರಮಾಚರಣೆಯನ್ನು ನಡೆಸಬಹುದಾಗಿದ್ದು, ಕೇವಲ ಹಸಿರ ಪಟಾಕಿ ಮಾತ್ರ ಬಳಸಲು ಅವಕಾಶ ಇದೆ.