LATEST NEWS
ದಕ್ಷಿಣಕನ್ನಡ ಉಡುಪಿ ಜಿಲ್ಲೆಗಳಲ್ಲಿ 5 ದಿನ ಭಾರಿ ಮಳೆ ಎಚ್ಚರಿಕೆ
ದಕ್ಷಿಣಕನ್ನಡ ಉಡುಪಿ ಜಿಲ್ಲೆಗಳಲ್ಲಿ 5 ದಿನ ಭಾರಿ ಮಳೆ ಎಚ್ಚರಿಕೆ
ಮಂಗಳೂರು ಜೂನ್ 28: ಕರಾವಳಿಯ ಜಿಲ್ಲೆಗಳಲ್ಲಿ ಇನ್ನು ಐದು ದಿನ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಸಂದರ್ಭದಲ್ಲಿ ಮಳೆಯ ಪ್ರಮಾಣ 20 ಸೆಂಟಿ ಮೀಟರ್ ಗಿಂತಲೂ ಅಧಿಕವಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ದಕ್ಷಿಣಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲ ಪ್ರದೇಶಗಳಲ್ಲಿ ಗುರುವಾರ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಮಳೆಯ ಪ್ರಮಾಣ 20 ಸೆಂಟಿ ಮೀಟರ್ ವರೆಗೂ ಸುರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮಕೈಗೊಳ್ಳುವಂತೆ ಜಿಲ್ಲಾಡಳಿತವನ್ನು ಹವಾಮಾನ ಇಲಾಖೆ ಎಚ್ಚರಿಸಿದೆ.
ದಕ್ಷಿಣಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಸಹಿತ ಸುಳ್ಯ ತಾಲೂಕಿನ ವಿವಿಧೆಡೆ ಮಂಗಳವಾರು ರಾತ್ರಿಯಿಂದಲೇ ನಿರಂತರವಾಗಿ ಮಳೆಯಾಗುತ್ತಿದ್ದು. ಮಂಗಳೂರು ನಗರ, ಸುತ್ತಮುತ್ತಲೂ ಭಾರಿ ಮಳೆಯಾಗಿದೆ.
ಉಡುಪಿ ಜಿಲ್ಲೆಯಲ್ಲೂ ಭಾರಿ ಮಳೆಯಾಗುತ್ತಿದ್ದು, ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದೆ. ಅಲ್ಲದೇ ಇಂದು ಮತ್ತೆ ಭಾರೀ ಮಳೆಯಾಗುವ ಸೂಚನೆ ಇದ್ದು, ಜಿಲ್ಲೆಯ ಕಡಲ ತೀರದಲ್ಲಿ ಕಡಲ ಭೋರ್ಗರೆತ ಉಡುಪಿ ತೀವ್ರಗೊಂಡಿದೆ. ಕಾಪು, ಮಲ್ಪೆ, ಪಡುಕೆರೆ ಬೀಚ್ ಗಳಲ್ಲಿ ಕಡಲಿನ ಅಲೆಗಳ ಅಬ್ಬರ ಹೆಚ್ಚಾಗಿದೆ. ಸಮುದ್ರ ಅಬ್ಬರದಿಂದ ಪಡುಕೆರೆಯಲ್ಲಿ ಕಡಲ್ಕೊರೆತ ಮುಂದುವರೆದಿದೆ. ಜಿಲ್ಲಾ ಶಾಲಾ- ಕಾಲೇಜುಗಳಿಗೆ ಯಾವುದೇ ರಜೆಯನ್ನು ಘೋಷಿಸಿಲ್ಲ. ಮಳೆಯ ಪರಿಸ್ಥಿತಿ ನೋಡಿಕೊಂಡು ರಜೆ ನೀಡುವಂತೆ ಶಿಕ್ಷಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.