DAKSHINA KANNADA
ಮುಂದಿನ ನಾಲ್ಕು ದಿನ ಕರಾವಳಿಯಲ್ಲಿ ಭಾರಿ ಮಳೆ, ರೆಡ್ ಅಲರ್ಟ್ ಘೋಷಣೆ..!
ಬೆಂಗಳೂರು : ಕರಾವಳಿಯಲ್ಲಿ ವರುಣನ ಆರ್ಭಟ ಕಳೆದ ಮೂರು ದಿನಗಳಿಂದ ಮುಂದುವರೆದಿದ್ದು ಮುಂದಿನ ನಾಲ್ಕು ದಿನ ಮತ್ತೆ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಭಾಗದಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕಾಫಿನಾಡು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಗೋಷಿಸಿದೆ. ಇದರ ಜೊತೆಗೆ ಬೆಳಗಾವಿ, ಹಾವೇರಿ, ಧಾರವಾಡ, ಹಾಸನ ಮೈಸೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಭಾರೀ ಮಳೆ ಹಿನ್ನಲ್ಲೆ ಬೆಂಗಳೂರಿನ ವಾತಾವರಣದಲ್ಲಿ ಬದಲಾವಣೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಇಲಾಖೆ ತಿಳಿಸಿದೆ.ಕಾರವಾರದ ದೇವಬಾಗ್ ಅರಬ್ಬಿ ಸಮುದ್ರದಲ್ಲಿ ಗಾಳಿ ಮಳೆ ಅಬ್ಬರಕ್ಕೆ ಕಡಲ ಕೊರೆತ ಉಂಟಾಗಿದೆ. ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯ ಕಾರಣ ಈಗಾಗಲೇ ಜೀವಹಾನಿ ಸಂಭವಿಸಿದ್ದು ಅಪಾರ ಪ್ರಮಾಣದಲ್ಲಿ ಆಸ್ತಿಪಾಸ್ತಿ ನಷ್ಟ ಉಂಟಾಗಿದೆ. ಉತ್ತರ ಕನ್ನಡದ ದೇವಬಾಗ್ ರೆಸಾರ್ಟ್ನ 4 ಕಾಟೇಜ್ ಮನೆಗಳಿಗೆ ಹಾನಿ ಆಗಿದ್ದು, ಕಡಲ ಕೊರೆತದ ಅಬ್ಬರಕ್ಕೆ ಮರಗಳು ನೆಲಕ್ಕುರುಳಿವೆ.