Connect with us

    LATEST NEWS

    ಇಬ್ಬರು ನಕ್ಸಲ್ ರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ…………!!

    ಮಂಗಳೂರು ಅಕ್ಟೋಬರ್ 21: ಕರಾವಳಿ ಇಬ್ಬರು ನಕ್ಸಲ್ ರ ಮಾಹಿತಿ ನೀಡಿದರೆ 10 ಲಕ್ಷ ಬಹುಮಾನ ನೀಡಲಾಗುವುದು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯ ಸಾರ್ವಜನಿಕರಿಗೆ ತಿಳುವಳಿಕೆಯ ಕರಪತ್ರ ವನ್ನು ಹೊರತಂದಿದೆ.


    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ಕೊಟ್ಯಂತಡ್ಕ ಮನೆಯ ಸುಂದರಿ ಆಲಿಯಾಸ್ ಗೀತಾ ಆಲಿಯಾಸ್ ಸಿಂಧು ಮತ್ತು ರಾಯಚೂರು ಜಿಲ್ಲೆಯ ಅರೋಲಿ ಗ್ರಾಮ ಕುಡುಡಿ ಮುಖ್ಯ ರಸ್ತೆಯ ಹನುವ್ವನ ದೂತರ ಮಠದ ಎದುರಿನ ಅಂಬೇಡ್ಕರ್ ಕಾಲನಿಯ ಮಹೇಶ್ ಆಲಿಯಾಸ್ ಜಯಣ್ಣ ಆಲಿಯಾಸ್ ಜಾನ್ ಆಲಿಯಾಸ್ ಮಾರಪ್ಪ ತಲೆ ಮರೆಸಿಕೊಂಡಿರುವ ಆರೋಪಿತರು.

    ಪಶ್ಚಿಮಘಟ್ಟದಲ್ಲಿ ತಲೆಎತ್ತಿರುವ ನಕ್ಸಲ್ ಚಳುವಳಿಯಲ್ಲಿ ಇವರು ಸಕ್ರಿಯಾರಾಗಿದ್ದರು ಎಂದು ತಿಳಿದುಬಂದಿದೆ. ಕರ್ನಾಟಕ ಪೊಲೀಸರು ಈ ಹಿಂದೆ ಇವರ ಪತ್ತೆಯ ಮಾಹಿತಿದಾರರಿಗೆ ಬಹುಮಾನ ಘೋಷಿಸಿತ್ತು. ಇದೀಗ ರಾಷ್ಟ್ರೀಯ ತನಿಖಾ ಸಂಸ್ಥೆಯು ಆರೋಪಿತರ ಪತ್ತೆಗಾಗಿ ಸಾರ್ವಜನಿಕ ತಿಳುವಳಿಕೆಯ ಕರಪತ್ರವನ್ನು ಹೊರತಂದಿದೆ. ಅಲ್ಲದೆ ಇಬ್ಬರ ಸುಳಿವು ನೀಡಿದವರಿಗೆ ತಲಾ ರೂ. 10 ಲಕ್ಷ ಬಹುಮಾನ ಘೋಷಿಸಿದೆ.

    ನ್ಯಾಶನಲ್ ಇನ್ವೇಷ್ಟೀಗೆಶನ್ ಏಜೆನ್ಸಿ ಹೌಸ್ ನಂಬ್ರ 28/ 443 ಗಿರಿನಗರ ಕಡವಂತರ ಕೊಚ್ಚಿ ಕೇರಳ- 682020, ಮೊಬೈಲ್ 9477715294 ಸಂಖ್ಯೆಗೆ ಸಂಪರ್ಕಿಸಬೇಕೆಂದು ಕೋರಲಾಗಿದೆ. ಸುಳಿವು ನೀಡಿದವರ ಮಾಹಿತಿ ಗೌಪ್ಯವಾಗಿರಿಸಲಾಗುವುದೆಂದು ತಿಳಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply