Connect with us

    LATEST NEWS

    ಟೆರರ್ ಲಿಂಕ್ – ಮಂಗಳೂರಿನಲ್ಲಿ ಎನ್ಐಎ ಕಚೇರಿ ಆರಂಭಿಸುವ ಬಗ್ಗೆ ಸುಳಿವು ಕೊಟ್ಟ ಸಿಎಂ

    ಮಂಗಳೂರು ಅಗಸ್ಟ್ 13: ಕರಾವಳಿಯಲ್ಲಿ ಉಗ್ರರ ನಂಟಿನ ಬಗ್ಗೆ ಎನ್ಐಎ ಅಧಿಕಾರಿಗಳು ಇತ್ತೀಚೆಗೆ ನಡೆಸಿದ ಬಳಿಕ ಮಂಗಳೂರಿನಲ್ಲಿ ಎನ್ಐಎ ಕಚೇರಿ ಆರಂಭಿಸಲು ಆಗ್ರಹ ಕೇಳಿ ಬಂದಿತ್ತು, ಇದೀಗ ಮಂಗಳೂರಿನಲ್ಲಿ ಎನ್ಐಎ ಕಚೇರಿ ಆರಂಭಿಸುವ ಕುರಿತಂತೆ ಸಭೆಗಳು ನಡೆದಿವೆ ಎಂದು ಎನ್ಐಎ ಕಚೇರಿ ಆರಂಭಿಸುವ ಸಾಧ್ಯತೆ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.


    ಮಂಗಳೂರಿನಲ್ಲಿ ಮಾತನಾಡಿದ ಅವರು ಈಗಾಗಲೇ ಒಬ್ಬ ದಕ್ಷ ಗೃಹ ಸಚಿವರನ್ನು ಮಾಡಲಾಗಿದೆ. ಎನ್ಐಎ ಕುರಿತಂತೆ ಅವರು ಈಗಾಗಲೇ ಎರಡು ಮೀಟಿಂಗ್ ಮಾಡಿದ್ದು, ಮುಂದೆಯೂ ಕೆಲ ಸಭೆ ‌ನಡೆಯಲಿದೆ. ಮುಂಬರುವ ದಿನಗಳಲ್ಲಿ ಗೃಹ ಸಚಿವರು ಇಲ್ಲಿಗೆ ಭೇಟಿ ಕೊಟ್ಟು ಪರಿಶೀಲಿಸ್ತಾರೆ ಎಂದರು. ಆ ಬಳಿಕ ನಾವೆಲ್ಲರೂ ಒಟ್ಟಾಗಿ ಚರ್ಚಿಸಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ತೇವೆ. ಈ ಬಗ್ಗೆ ಕೆಲವು ವಿಚಾರಗಳನ್ನು ನಾವು ಬಹಿರಂಗ ಪಡಿಸಲು ಆಗಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದರು.

    https://youtu.be/SI3y5vElnYc

    Share Information
    Advertisement
    Click to comment

    Leave a Reply

    Your email address will not be published. Required fields are marked *