DAKSHINA KANNADA
ದಕ್ಷಿಣಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ಎನ್ಐಎ ದಾಳಿ…!!
ಮಂಗಳೂರು ಮೇ 31: ಬೆಳ್ಳಂಬೆಳಿಗ್ಗೆ ದಕ್ಷಿಣಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಕಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು,ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು, ಬಂಟ್ವಾಳಗಳಲ್ಲಿ ಮನೆ, ಕಚೇರಿ, ಆಸ್ಪತ್ರೆಗಳು ಸೇರಿದಂತೆ 16 ಕಡೆಗಳಲ್ಲಿ ಎನ್ ಐಎ ದಾಳಿಯಾಗಿದೆ.
ಕಳೆದ ವರ್ಷ ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆದು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಇಂದು ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ದಿಢೀರ್ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಭಯೋತ್ಪಾದಕ ಕೃತ್ಯಗಳಿಗೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ, ದಕ್ಷಿಣ ಭಾರತದ ಪಿಎಫ್ಐ ಹವಾಲಾ ಹಣ ಜಾಲ, ಭಾರತದಲ್ಲಿ ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದ್ದ ಹವಾಲಾ ನೆಟ್ವರ್ಕ್ ಪತ್ತೆ ಕಾರ್ಯ, ಬಿಹಾರದ ಪಾಟ್ನಾದಲ್ಲಿ 2022ರ ಜುಲೈ ತಿಂಗಳಲ್ಲಿನ ಫುಲ್ವಾರಿ ಶರೀಫ್ ಪ್ರಕರಣಗಳೂ ಸೇರಿದಂತೆ ದೇಶದಲ್ಲಿ ಕೋಮು ಗಮಭೆ ಸೃಷ್ಠಿಸಲು ಯತ್ನಿಸಿದ ಆರೋಪಗಳೆಲ್ಲವೂ ಸೇರಿ ವಿವಿಧ ಪ್ರಕರಣಗಳ ತನಿಖೆಯ ಜಾಡು ಹಿಡಿದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತನಿಖೆ ಪ್ರಗತಿಯಲ್ಲಿದೆ.
ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ ಹಲವು ಕಡೆಗಳಲ್ಲಿ ಸಾಕಷ್ಟು ಮನೆ, ಕಚೇರಿಗಳು, ಒಂದು ಆಸ್ಪತ್ರೆ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.