Connect with us

DAKSHINA KANNADA

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ – ಪುತ್ತೂರು ಸುಳ್ಯದಲ್ಲಿ ಎನ್ಐಎ ದಾಳಿ

ಪುತ್ತೂರು ಸೆಪ್ಟೆಂಬರ್ 06: ಬಿಜೆಪಿ ಕಾರ್ಯಕರ್ತ ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಸುಳ್ಯದ 32 ಕಡೆಗಳಲ್ಲಿ ಎನ್ಐಎ ದಾಳಿ ನಡೆಸಿದೆ.

ಎರಡು ತಿಂಗಳ ಹಿಂದೆ ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದ ಪ್ರವೀಣ್‌ ನೆಟ್ಟಾರು ಹತ್ಯೆ ತನಿಖೆಯನ್ನು ಎನ್‌ಐಎ ತಂಡ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಕೆಲವು ಮಾಹಿತಿಯನ್ನಾಧರಿಸಿ 32 ಕಡೆ ಮನೆ ಹಾಗೂ ಕೆಲ‌ ಖಾಸಗಿ ಕಟ್ಟಡಗಳ ಮೇಲೆ ಎನ್ಐಎ ದಾಳಿ ನಡೆಸಿದೆ.

ಘಟನೆಗೆ ಸಂಬಂಧಿಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆಗೆ ಒಳಪಡಿಸಿದೆ. ಎನ್ಐಎ ಅಧಿಕಾರಿಗಳ ತಂಡಕ್ಕೆ ರಾಜ್ಯ ಪೊಲೀಸರು ಸಾಥ್ ನೀಡಿದ್ದಾರೆ.

Advertisement
Click to comment

You must be logged in to post a comment Login

Leave a Reply