DAKSHINA KANNADA
ಜಿಲ್ಲೆಯಲ್ಲಿ ಎನ್ಐಎ ದಾಳಿ: ಪುತ್ತೂರಿನಲ್ಲಿ ನಾಲ್ವರ ಬಂಧನ
ಪುತ್ತೂರು ಮೇ 31: ಬೆಳ್ಳಂಬೆಳಿಗ್ಗೆ ದಕ್ಷಿಣಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಕಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಳೆದ ವರ್ಷ ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆದು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಇಂದು ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ದಿಢೀರ್ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಈ ದಾಳಿಯಲ್ಲಿ ಪುತ್ತೂರಿನ ನಾಲ್ವರನ್ನು ಎನ್ಐಎ ಅಧಿಕಾರಿಗಳು ಬಂಧಿಸಿ ಕರೆದೊಯ್ದಿದ್ದಾರೆ. ಮಹಮ್ಮದ್ ಹ್ಯಾರೀಸ್ ಕುಂಬ್ರ (32), ಸಜ್ಜದ್ ಹುಸೈನ್, ಕೋಡಿಂಬಾಡಿ (37), ಫೈಜಲ್ ಅಹಮ್ಮದ್, ತಾರಿಗುಡ್ಡೆ, ಸಂಶುದ್ಧೀನ್ ಕೂರ್ನಡ್ಕ ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳಿಗೆ ಪಿಎಫ್ಐ ಲಿಂಕ್ ಸಾಧ್ಯತೆ ಇದೆ ಎನ್ನಲಾಗಿದೆ.