Connect with us

    LATEST NEWS

    ಕೇರಳದಲ್ಲಿ ನಿಫಾ ವೈರಸ್ ಭೀತಿ : ಮಲಪ್ಪುರಂನಲ್ಲಿ ಬಾಲಕನಿಗೆ ಸೋಂಕು ಧೃಡ..!

    ತಿರುವನಂತಪುರಂ : ಕೇರಳದಲ್ಲಿ ಮತ್ತೆ ನಿಫಾ ವೈರಸ್ ಭೀತಿ ಎದುರಾಗಿದ್ದು  ಮಲಪ್ಪುರಂ ಜಿಲ್ಲೆಯಲ್ಲಿ ಬಾಲಕನೋರ್ವನಿಗೆ ನಿಫಾ ಸೋಂಕು ತಗುಲಿರುವುದು ದೃಢಪಟ್ಟಿದೆ.

    ಆರೋಗ್ಯ ಸಚಿವೆ ವೀಣಾ ಜಾರ್ಜ್‌ ನಿಫಾ ವೈರಸ್ ಸೋಂಕನ್ನು ಧೃಡಪಡಿಸಿದೆ.   ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 14 ವರ್ಷದ ಬಾಲಕನಲ್ಲಿ ನಿಫಾ ಸೋಂಕಿರುವುದನ್ನು ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಯು (ಎನ್‌ಐವಿ) ದೃಢಪಡಿಸಿದೆ.  ‘ಸೋಂಕು ತಗುಲಿದ ಬಾಲಕನನ್ನು ಕೋಯಿಕ್ಕೋಡ್‌ನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ. ಆತನಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ. ಬಾಲಕನ ಸಂಪರ್ಕಕ್ಕೆ ಬಂದಿದ್ದವರನ್ನು ಪತ್ತೆ ಮಾಡಲಾಗಿದ್ದು, ಅವರನ್ನು ಕ್ವಾರಂಟೇನ್‌ ಮಾಡಲಾಗಿದೆ. ಎಲ್ಲರ ಮಾದರಿಗಳನ್ನು ರಾಷ್ಟ್ರೀಯ ವೈರಾಣು ಸಂಸ್ಥೆಗೆ ಪರೀಕ್ಷೆಗೆ ಕಳಿಸಲಾಗಿದೆ’ ಎಂದು ಸಚಿವೆ ವೀಣಾ ಜಾರ್ಜ್‌  ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *