Connect with us

    KARNATAKA

    ಇಂದಿನಿಂದ ಜನವರಿ 2 ರವರೆಗೆ ರಾಜ್ಯದಲ್ಲಿ ರಾತ್ರಿ ಕರ್ಪ್ಯೂ ಜಾರಿ

    ಬೆಂಗಳೂರು ಡಿಸೆಂಬರ್ 23: ಕೊರೊನಾ ಸೊಂಕಿನ ಎರಡನೇ ಅಲೆ ತಡೆಯುವ ನಿಟ್ಟಿನಲ್ಲಿ ರಾಜ್ಯದಲ್ಲಿ ಇಂದಿಂದ ಜನವರಿ 2 ರವರೆಗೆ ರಾತ್ರಿ ಕರ್ಪ್ಯೂ ಜಾರಿ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.

    ಬುಧವಾರ ಕೋವಿಡ್ ನಿಯಂತ್ರಣ ಕಾರ್ಯಪಡೆ, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜತೆ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಬುಧವಾರ ರಾತ್ರಿಯಿಂದಲೇ ಈ ಕ್ರಮ ಜಾರಿಗೆ ಬರಲಿದೆ. ಇಡೀ ರಾಜ್ಯಕ್ಕೆ ಈ ಆದೇಶ ಅನ್ವಯವಾಗಲಿದೆ’ ಎಂದರು. ವಿದೇಶಗಳಿಂದ ರಾಜ್ಯಕ್ಕೆ ಬರುವವರು ಆರ್ ಟಿ-ಪಿಸಿಆರ್ ವಿಧಾನದಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ನೆಗೆಟಿವ್ ವರದಿ ಹೊಂದಿರಬೇಕು. ಹೊರಗೆ ಓಡಾಡುವಾಗ 72 ಗಂಟೆಗಳ ಅವಧಿಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ ಎಂದರು. ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.


    ಒಟ್ಟು 9 ದಿನಗಳ ಈ ರಾತ್ರಿ ಕರ್ಪ್ಯೂ ಜಾರಿಯಲ್ಲಿರಲಿದೆ. ಇದು ಸಂಪೂರ್ಣ ರಾಜ್ಯಕ್ಕೆ ಅನ್ವಯಿಸಲಿದೆ ಎಂದು ಸಿಎಂ ತಿಳಿಸಿದ್ದಾರೆ. ಇನ್ನು ಹೊರದೇಶಗಳಿಂದ ರಾಜ್ಯಕ್ಕೆ ಬರುವ ಎಲ್ಲರೂ ಕೊರೊನಾ ನೆಗೆಟಿವ್ ಪ್ರಮಾಣಪತ್ರದ ಜೊತೆಗೆ ಬರಬೇಕಾಗಿದ್ದು, 72 ಗಂಟೆಗಳ ಒಳಗೆ ಕೊರೊನಾ ಪರಿಕ್ಷೆ ಮಾಡಿದ ವರದಿ ಕಡ್ಡಾಯವಾಗಿದೆ. ಅಲ್ಲದೆ ವಿಮಾನ ನಿಲ್ದಾಣಗಳಲ್ಲೂ ಕೊರೊನಾ ಪರೀಕ್ಷೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *