Connect with us

KARNATAKA

ಓಮಿಕ್ರಾನ್ ಆತಂಕ ರಾಜ್ಯಾದ್ಯಂತ ಡಿಸೆಂಬರ್ 28 ರಿಂದ ನೈಟ್ ಕರ್ಪ್ಯೂ ಜಾರಿ

ಬೆಂಗಳೂರು ಡಿಸೆಂಬರ್ 26: ಓಮಿಕ್ರಾನ್ ಆತಂಕದ ನಡುವೆ ಮತ್ತೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೆ ಬಂದಿದ್ದು, ಡಿಸೆಂಬರ್ 28 ರಿಂದ 10 ದಿನಗಳ ಕಾಲ ರಾಜ್ಯಾದ್ಯಂತ ನೈಟ್ ಕರ್ಪ್ಯೂ ಜಾರಿ ಮಾಡುವುದಾಗಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.

ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕರೊನಾ ಮತ್ತು ಓಮಿಕ್ರಾನ್ ಹರಡುವಿಕೆ ತಡೆ ಹಿನ್ನೆಲೆ ಸರ್ಕಾರ ಕೈಗೊಂಡ ಮಹತ್ವದ ನಿರ್ಧಾರವನ್ನ ಘೋಷಣೆ
ಮಾಡಿದರು. ಡಿಸೆಂಬರ್ 28ರಿಂದ 10 ದಿನಗಳ ಜನವರಿ 6 ರ ವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿರುತ್ತದೆ. ಡಿ.28ರಿಂದ 10 ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿ ಇರಲಿದೆ ಅಂತ ಸಚಿವರು ತಿಳಿಸಿದ್ದಾರೆ.

ಇನ್ನು ಹೊಸವರ್ಷಾಚರಣೆಗೆ ಸರಕಾರ ಬ್ರೇಕ್ ಹಾಕಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ ಹೊಸ ವರ್ಷ ಆಚರಿಸುವಂತಿಲ್ಲ ಎಂದು ತಿಳಿಸಿದೆ. ಅಲ್ಲದೆ  ಸಭೆ ಸಮಾರಂಭಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.  ಅಲ್ಲದೇ  ಬಾರ್, ಪಬ್, ಕ್ಲಬ್, ರೆಸ್ಟೋರೆಂಟ್‌ಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಮಿತಿಗೊಳಿಸಲಾಗಿದೆ ಅಂತ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ 10 ಗಂಟೆಯಿಂದಲೇ ಎಲ್ಲವೂ ಬಂದ್ ಆಗಲಿದೆ. 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಎಲ್ಲಾ ಚವಟಿಕೆಗಳಿಗೂ ನಿರ್ಬಂಧವನ್ನು ಹೇರಲಾಗಿದೆ. ಅಂತರ್ ರಾಜ್ಯ ಪ್ರಯಾಣಕಷ್ಟೆ ರಾತ್ರಿ 10 ಗಂಟೆಗ ನಂತರ ಅವಕಾಶವನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

Advertisement
Click to comment

You must be logged in to post a comment Login

Leave a Reply