LATEST NEWS
ಉಡುಪಿ ಮತ್ತು ಮಂಗಳೂರಿನಲ್ಲಿ ಎಪ್ರಿಲ್ 10 ರಿಂದ ನೈಟ್ ಕರ್ಪ್ಯೂ ಜಾರಿ – ಸಿಎಂ ಆದೇಶ
ಮಂಗಳೂರು ಎಪ್ರಿಲ್ 8: ದೇಶದಲ್ಲಿ ಕೊರೊನಾ ಎರಡನೇ ಅಲೆ ಭೀತಿ ಹಿನ್ನಲೆ ರಾತ್ರಿ ಕರ್ಪ್ಯೂ ಹೇರಿಕೆಗೆ ಪ್ರಧಾನಿ ನರೇಂದ್ರ ಮೋದಿ ಓಲವು ತೋರಿಸಿದ ಬೆನ್ನಲ್ಲೆ ಮುಖ್ಯಮಂತ್ರಿ ಯಡಿಯೂರಪ್ಪ ಕೊರೊನಾ ಪ್ರಕರಣ ಏರಿಕೆಯಾಗಿರುವ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಎಪ್ರಿಲ್ 10 ರಿಂದ ರಾತ್ರಿ ಕಪ್ರ್ಯೂ ಹೇರಿ ಆದೇಶ ಹೊರಡಿಸಿದ್ದಾರೆ.
ಎಪ್ರಿಲ್ 10 ಎಪ್ರಿಲ್ 20 ರವರ ತನಕ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕೊರೊನಾ ಕರ್ಪ್ಯೂ ಜಾರಿಯಲ್ಲಿದ್ದು, ಈ ಸಂದರ್ಭ ಜನರ ಸಂಚಾರವನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ. ಈ ಕೊರೊನಾ ಕರ್ಪ್ಯೂ ಕೊರೊನಾ ಪ್ರಕರಣಗಳು ಹೆಚ್ಚಾಗಿ ಇರುವ ಉಡುಪಿ, ಬೆಂಗಳೂರು, ಮೈಸೂರು, ಬೀದರ್, ತುಮಕೂರು, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 5 ಗಂಟೆಯವರೆಗೆ ಕೊರೋನಾ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಸಿಎಂ ತಿಳಿಸಿದ್ದಾರೆ.
ಬೆಂಗಳೂರು, ಮೈಸೂರು, ಬಳ್ಳಾರಿ, ಕಲಬುರಗಿ, ಮಣಿಪಾಲ, ತುಮಕೂರು, ಬೀದರ್, ಉಡುಪಿ, ಮಂಗಳೂರು ನಗರಗಳಲ್ಲಿ ಪ್ರಾಯೋಗಿಕವಾಗಿ ಕೊರೊನಾ ಕರ್ಫ್ಯೂ ಬರಲಿದೆ. ಅಗತ್ಯ ಸೇವೆಗಳನ್ನ ಹೊರತುಪಡಿಸಿ ಎಲ್ಲ ಕಮರ್ಷಿಯಲ್ ಚಟುವಟಿಕೆಗಳ ಮೇಲೆ ನಿರ್ಬಂಧ ಇದ್ದು. ನಾಳೆಯಿಂದ ಮಾಸ್ಕ್ ಧರಿಸದಿದ್ದರೆ ದಂಡಾಸ್ತ್ರ ಪ್ರಯೋಗಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಏಳು ನಗರಗಳಲ್ಲಿ 10 ದಿನ ಪ್ರಾಯೋಗಿಕವಾಗಿ ಕೊರೊನಾ ಕರ್ಫ್ಯೂವನ್ನ ಸರ್ಕಾರ ಘೋಷಣೆ ಮಾಡಿದೆ. ಕರ್ಫ್ಯೂ ಅವಧಿ ವೇಳೆ ಹೊಟೇಲ್, ಬಾರ್, ಪಬ್, ನೈಟ್ ಪಾರ್ಟಿ, ರೆಸ್ಟೋರೆಂಟ್, ಸಿನಿಮಾಗಳು ಬಂದ್ ಆಗಲಿವೆ ಎನ್ನಲಾಗಿದೆ.