Connect with us

    LATEST NEWS

    ಕಂಬಳ ಯಕ್ಷಗಾನಕ್ಕೂ ನೈಟ್‌ ಕರ್ಫ್ಯೂ ಅನ್ವಯ…10ಗಂಟೆಯೊಳಗೆ ಎಲ್ಲಾ ಬಂದ್ – ಡಿಸಿ ಸೂಚನೆ

    ಮಂಗಳೂರು ಡಿಸೆಂಬರ್ 27: ಓಮಿಕ್ರಾನ್ ಆತಂಕದ ಹಿನ್ನಲೆ ನಾಳೆಯಿಂದ ರಾಜ್ಯದಲ್ಲಿ ರಾತ್ರಿ ಕರ್ಪ್ಯೂ ಜಾರಿಗೊಳಿಸಿರುವ ರಾಜ್ಯ ಸರಕಾರದ ಆದೇಶ ಕರಾವಳಿಯಲ್ಲಿ ನಡೆಯುವ ಯಕ್ಷಗಾನ ಹಾಗೂ ಕಂಬಳಕ್ಕೂ ಅನ್ವಯಿಸಲಿದೆ ಎಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.


    ನೈಟ್‌ ಕರ್ಫ್ಯೂ ವಿಚಾರದಲ್ಲಿ ರಾಜ್ಯ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುವುದು. ಕಂಬಳ, ಯಕ್ಷಗಾನ ಸೇರಿದಂತೆ ರಾತ್ರಿ ನಡೆಯುವಂತಹ ಕಾರ್ಯಕ್ರಮಗಳನ್ನು 10 ಗಂಟೆಯೊಳಗೆ ಮುಗಿಸಬೇಕು, ಇದರಲ್ಲಿ ಯಾವುದೇ ರಿಯಾಯಿತಿ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸ್ಪಷ್ಟಪಡಿಸಿದ್ದಾರೆ.

    ಸೋಮವಾರ ಈ ಕುರಿತು ಸಭೆ ನಡೆಸಿ ಆಯೋಜಕರ ಜತೆಗೆ ಚರ್ಚಿಸಲಾಗುವುದು. ನೈಟ್‌ ಕರ್ಫ್ಯೂ ಅವಧಿ ಆರಂಭಕ್ಕೂ ಮೊದಲೇ ಎಲ್ಲ ಕಾರ್ಯಕ್ರಮ ಮುಗಿಸುವಂತೆ ಸಮಬಂಧಪಟ್ಟವರಿಗೆ ಸೂಚನೆ ನೀಡಲಾಗುವುದು. ಓಮೈಕ್ರಾನ್‌ ಹೆಚ್ಚುತ್ತಿರುವ ಕಾರಣ ಸರ್ಕಾರವು ಕಟ್ಟೆಚ್ಚರದ ನಿಯಾಮಾವಳಿಗಳನ್ನು ಜಾರಿಗೆ ತಂದಿದ್ದು, ಯಾವುದೇ ಕಾರಣಕ್ಕೆ ನೈಟ್‌ ಕರ್ಫ್ಯೂ ಅವಧಿಯಲ್ಲಿ ನಿಯಮಗಳನ್ನು ಸಡಿಲಗೊಳಿಸಲು ಆಗುವುದಿಲ್ಲ ಎಂದು ತಿಳಿಸಿದ್ದಾರೆ.

    ರಾತ್ರಿ ವೇಳೆ ನಡೆಯುವಂತಹ ಯಕ್ಷಗಾನ, ಕಂಬಳಗಳನ್ನು ಬೇಗನೆ ಆರಂಭಿಸಿ, ನೈಟ್‌ ಕರ್ಫ್ಯೂ ಅವಧಿ ಆರಂಭವಾಗುವುದರೊಳಗೆ ಮುಗಿಸಬೇಕು. ನೈಟ್‌ ಕರ್ಫ್ಯೂ ನಿಯಮಗಳು ಇಡೀ ರಾಜ್ಯಕ್ಕೆ ಅನ್ವಯ ಆಗುವುದರಿಂದ, ನಿಯಮ ಸಡಿಲಗೊಳಿಸುವ ನಿರ್ಧಾರವೂ ಸರ್ಕಾರದ ಮಟ್ಟದಲ್ಲಿಯೇ ಆಗಬೇಕಾಗುತ್ತದೆ’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply