Connect with us

DAKSHINA KANNADA

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಯೋಜನೆಗಳಿಗೆ ಅರ್ಜಿ ಆಹ್ವಾನ..!

2023-24ನೇ ಸಾಲಿಗೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸಾಲ ಯೋಜನೆಗಳು:

ಗಂಗಾ ಕಲ್ಯಾಣ ನೀರಾವರಿಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‍ಗಳ ಸಹಯೋಗದೊಂದಿಗೆ) ಹಾಗೂ ಸ್ವಾವಲಂಬಿ ಸಾರಥಿ ಯೋಜನೆ.

ಹೆಚ್ಚಿನ ಮಾಹಿತಿಗೆ ಜಿಲ್ಲೆಯಲ್ಲಿನ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿ., ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಅಥವಾ ನಿಗಮದ ವೆಬ್‍ಸೈಟ್ ಗೆ ಸಂಪರ್ಕಿಸಬಹುದಾಗಿದೆ.

ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ 2023ರ ನವೆಂಬರ್ 2ರೊಳಗೆ ಸೇವಾ ಸಿಂಧು ಪೋರ್ಟಲ್, ಗ್ರಾಮ ವನ್, ಬೆಂಗಳೂರು ಒನ್ ಅಥವಾ ಕರ್ನಾಟಕವನ್ನು ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು

ಎಂದು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *