Connect with us

    BELTHANGADI

    ಕರಾವಳಿಯಲ್ಲಿ ಟೆಂಪಲ್ ರನ್ ನಲ್ಲಿ ನಿಖಿಲ್ ಕುಮಾರಸ್ವಾಮಿ

    ಮಂಗಳೂರು ಸೆಪ್ಟೆಂಬರ್ 23: ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ತಮ್ಮ ಕುಟುಂಬದೊಂದಿಗೆ ಕರಾವಳಿಯಲ್ಲಿ ಟೆಂಪಲ್ ರನ್ ನಲ್ಲಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.


    ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಹಾಗೂ ಮುಖಂಡ ನಿಖಿಲ್ ಕುಮಾರಸ್ವಾಮಿ ತಮ್ಮ ಪತ್ನಿ ಸಮೇತ ಕುಕ್ಕೆಸುಬ್ರಹ್ಮಣ್ಯಕ್ಕೆ ಆಗಮಿಸಿದ್ದರು. ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು, ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಕರ್ನಾಟಕ ರಾಜ್ಯ ಸರಕಾರ ಕಳೆದ ಒಂದುವರೆ ವರ್ಷದ ಆಡಳಿತದ ಅವಧಿಯಲ್ಲಿ ಸಂಪೂರ್ಣ ವಿಫಲತೆಯನ್ನು ಕಾಣುವುದರೊಂದಿಗೆ ಹಗರಣದಲ್ಲಿ ಸಿಕ್ಕಿ ಹಾಕಿಕೊಂಡಿದೆ.

    ಈ ಬಗ್ಗೆ ರಾಜ್ಯಾದ್ಯಂತ ಪ್ರವಾಸ ಮಾಡಿ ಜನರಿಗೆ ಅರಿವು ಹಾಗೂ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದೇನೆ. ಈಗಾಗಲೇ ನಮ್ಮ ಜೆಡಿಎಸ್ ವತಿಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸದಸ್ಯತ್ವ ನೋಂದಣಿ ಹಾಗೂ ಬೂತ್ ಕಮಿಟಿಯನ್ನು ರಚನೆ ಮಾಡಲಾಗಿದೆ. ಇದರೊಂದಿಗೆ ಮುಂದಿನ ದಿನಗಳಲ್ಲಿ ಜೆಡಿಎಸ್ ಬಲವರ್ಧನೆಗೊಳ್ಳಲಿದೆ. ಪಕ್ಷದ ಕಾರ್ಯಕರ್ತರನ್ನು ಹುರಿ ದುಂಬಿಸುವ ಕೆಲಸ ಮಾಡುತಿದ್ದೇವೆ. ಯಾವುದೇ ಚುನಾವಣೆ ಇರಲಿ ಪಕ್ಷದ ಸಂಘಟನೆಗೆ ಒತ್ತನ್ನು ಕೊಡುವ ಕೆಲಸ ಮಾಡಬೇಕಾಗಿದೆ ಎಂದರು.


    ಬಳಿಕ ಧರ್ಮಸ್ಥಳಕ್ಕೆ ತೆರಳಿದ ಅವರು ಮಂಜುನಾಥನ ದರ್ಶನ ಪಡೆದರು. ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

    Share Information
    Advertisement
    Click to comment

    You must be logged in to post a comment Login

    Leave a Reply