Connect with us

    DAKSHINA KANNADA

    ನಿಫಾ ವೈರಸ್ ಬಾಧಿಸಿದ್ದ ರೋಗಿಗೆ ಆರೈಕೆ ಮಾಡಿದ ಕಡಬದ ಯುವಕನಿಗೆ ನಿಫಾ‌ ಸೋಂಕು – ಎಂಟು ತಿಂಗಳಿನಿಂದ ಕೋಮಾದಲ್ಲಿ

    ಕಡಬ ಜುಲೈ 29: ನಿಫಾ ವೈರಸ್ ಎಷ್ಟು ಡೆಂಜರಸ್ ಎನ್ನುವುದು ಇತ್ತೀಚೆಗೆ ತಿಳಿದು ಬರುತ್ತಿದೆ. ಇದೀಗ ನರ್ಸ್ ಆಗಿರುವ ಕಡಬದ ಯುವಕನೊಬ್ಬ ನಿಫಾ ವೈರಲ್ ಸೊಂಕಿತ ರೋಗಿಗೆ ಆರೈಕೆ ಮಾಡಿದ ಕಾರಣ ನಿಫಾ ಸೊಂಕಿಗೆ ತುತ್ತಾಗಿ 8 ಜೀವನ್ಮರಣ ಸ್ಥಿತಿಯಲ್ಲಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.


    ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ಧಾಳ ಸಮೀಪದ ತುಂಬ್ಯ ನಿವಾಸಿ ತೋಮಸ್ ಟಿ.ಸಿ. ಎಂಬವರ ಪುತ್ರ ಟಿಟ್ಟೋ ತೋಮಸ್(24) ಇದೀಗ ಜೀವನ್ಮರಣ ಸ್ಥಿತಿಯಲ್ಲಿ ದಿನದೂಡುತ್ತಿರುವ ಯುವಕ.
    ಬಿಎಸ್ಸಿ ನರ್ಸಿಂಗ್ ಪದವೀಧರನಾಗಿರುವ ಟಿಟ್ಟೋ ತೋಮಸ್ ಕೇರಳದ ಕ್ಯಾಲಿಕಟ್ ನಲ್ಲಿರುವ ಇಕ್ರಾ ಇಂಟರ್ನ್ಯಾಷನಲ್ ಹಾಸ್ಪಿಟಲ್ ಆ್ಯಂಡ್ ರಿಸರ್ಚ್ ಸೆಂಟರ್ ನಲ್ಲಿ 2023 ರಿಂದ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದು, 2023 ರ ಸೆಪ್ಟೆಂಬರ್ ನಲ್ಲಿ ನಿಫಾ ವೈರಸ್ ಹೊಂದಿದ್ದ ರೋಗಿಯ ಆರೈಕೆ ಮಾಡಿದ್ದಾರೆ ಎನ್ನಲಾಗಿದೆ. ಕ್ವಾರಂಟೈನ್ ನಲ್ಲಿದ್ದ ಟಿಟ್ಟೋ ಥಾಮಸ್ ಗೆ ಎರಡು ತಿಂಗಳು ಕಳೆದ ನಂತರ ವಿಪರೀತ ತಲೆನೋವು ಕಾಣಿಸಿಕೊಂಡಿದ್ದು, ಡಿಸೆಂಬರ್ ನಲ್ಲಿ ಸ್ಕ್ಯಾನಿಂಗ್ ನಡೆಸಿದಾಗ ಮಿದುಳಿನ ಸ್ಟ್ರೋಕ್‌ಗೆ ತುತ್ತಾಗಿರುವುದು ತಿಳಿದು ಬಂದಿದ್ದು, ಮರುದಿನವೇ ಕೋಮಾಗೆ ಜಾರಿದ್ದಾರೆ ಎನ್ನಲಾಗಿದೆ. ನಂತರದ ದಿನಗಳಲ್ಲಿ ಆಸ್ಪತ್ರೆಯ ಆಡಳಿತ ಮಂಡಳಿಯ ವತಿಯಿಂದಲೇ ಚಿಕಿತ್ಸೆ ನೀಡಲಾಗಿದ್ದು, ಕಳೆದ ಎಂಟು ತಿಂಗಳಲ್ಲಿ ಯಾವುದೇ ಫಲ ಕಾಣದ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿಚಾರಿಸಿದಾಗ ಆಡಳಿತ ಮಂಡಳಿಯು ಈಗಾಗಲೇ 40 ಲಕ್ಷ ರೂ.ಗಳಷ್ಟು ಖರ್ಚನ್ನು ಭರಿಸಿದ್ದು, ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ಇನ್ಮುಂದೆ ನಿಭಾಯಿಸುವುದು ಕಷ್ಟ ಎಂದು ಪ್ರತಿಕ್ರಿಯೆ ನೀಡಿದೆ.

    ನಿಫಾ ವೈರಸ್ ಬಾಧಿಸಿರುವ ಹಿನ್ನೆಲೆಯಲ್ಲಿ ಅತ್ಯುನ್ನತ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡುವಂತೆ ಆಗ್ರಹಿಸಿ ಕುಟುಂಬಸ್ಥರು ಕೇರಳ ಸರಕಾರದ ಮೊರೆ ಹೋಗಿದ್ದು, ಸರಕಾರದ ಪ್ರತಿಕ್ರಿಯೆ ಇನ್ನಷ್ಟೇ ಬರಬೇಕಿದೆ.

    Share Information
    Advertisement
    Click to comment

    You must be logged in to post a comment Login

    Leave a Reply