Connect with us

KARNATAKA

ಬೆಂಗಳೂರಲ್ಲಿ ನಿರ್ಭಯಾ ರೀತಿಯ ಅತ್ಯಾಚಾರ: ಬಾಂಗ್ಲಾ ಯುವತಿಯ ರೇಪ್, ಐವರು ವಿಕೃತ ಕಾಮಿಗಳ ಬಂಧನ

ಬೆಂಗಳೂರು, ಮೇ 28: ರಾಜಧಾನಿ ಬೆಂಗಳೂರಿನಲ್ಲಿ ನಿರ್ಭಯಾ ರೀತಿಯ ಅತ್ಯಾಚಾರ ಪ್ರಕರಣ ತಡವಾಗಿ ಬೆಳಕಿಗೆ ಬಂದಿತ್ತು. ಯುವತಿಯನ್ನು ಅತ್ಯಾಚಾರಗೈದು ಗುಪ್ತಾಂಗಕ್ಕೆ ಮದ್ಯದ ಬಾಟಲ್ ಇರಿಸಿ ವಿಕೃತಿ ಮರೆದಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿತ್ತು.

ಇಂದು ಅತ್ಯಾಚಾರ ಮಾಡಿದ ಸ್ಥಳ ಪರಿಶೀಲನೆಗೆ ಆರೋಪಿಗಳಾದ ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದಾಯ್ ಬಾಬು ಹಾಗೂ ಹಕೀಲ್ ಅವರನ್ನು ಕರೆದುಕೊಂಡು ಹೋದಾಗ, ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಪ್ರಯತ್ನಿಸಿದ್ದಾರೆ. ನಂತರ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದಾಗ ಪೊಲೀಸರು ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ.

ಇಂದು ಬೆಳಿಗ್ಗೆ ಸ್ಥಳ ಮಹಜರು ಮಾಡುವಾಗ ಹಲ್ಲೆ ಮಾಡಿ ತಪ್ಪಿಸಿಕೊಳ್ಳುವ ಸಂದರ್ಭದಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹೊಡೆದಿದ್ದಾರೆ. 10 ದಿನಗಳ ಹಿಂದೆ ಅತ್ಯಾಚಾರದ ವೀಡಿಯೋ ವೈರಲ್ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ನಾಲ್ವರು ಕಾಮುಕ ಆರೋಪಿಗಳಿಗೆ ಇಬ್ಬರು ಯುವತಿಯರು ಸಾಥ್ ನೀಡಿದ್ದಾರೆ ಎಂಬ ವಿಷಯವೂ ಬೆಳಕಿಗೆ ಬಂದಿದೆ.

ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದಾಯ್ ಬಾಬು ಹಾಗೂ ಹಕೀಲ್ ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳು ಬಾಂಗ್ಲಾ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದರು. ಸಂತ್ರಸ್ಥೆ ಯುವತಿ ಸೇರಿದಂತೆ ಆರೋಪಿಗಳು ರಾಮಮೂರ್ತಿ ನಗರದ ಎನ್‌ಆರ್‌ಐ ಲೇಔಟ್‌ನಲ್ಲಿ ವಾಸವಾಗಿದ್ದರು. ಯುವತಿಯನ್ನು ಅತ್ಯಾಚಾರಗೈದು, ದೌರ್ಜನ್ಯ ನಡೆಸಿದ್ದಾರೆ. ಈ ಎಲ್ಲ ಘಟನೆಯನ್ನು ಕಿರಾತಕರು ವಿಡಿಯೋ ಮಾಡಿದ್ದು, ಯುವತಿಯ ಮೇಲಿನ ದ್ವೇಷಕ್ಕಾಗಿ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.