LATEST NEWS
ಉಡುಪಿ ಜಿಲ್ಲೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೂರು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದು, ಉಡುಪಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಎರಡು ಕಾರ್ಯಕ್ರಮಗಳ ಜೊತೆ ಮೂರು ದೇಗುಲಗಳ ದರ್ಶನ ಮಾಡಿದ್ದಾರೆ.
ರಾಜ್ಯಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಕರ್ನಾಟಕಕ್ಕೆ ಎಂಟ್ರಿ ಕೊಟ್ಟಿರುವ ನಿರ್ಮಲಾ ಸೀತಾರಾಮನ್ ಇದೀಗ ಕರಾವಳಿ ಜಿಲ್ಲೆಗಳಲ್ಲಿ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ನಡುವೆ ಟೆಂಪಲ್ ರನ್ ನಡೆಸಿದ್ದು, ಕೊಲ್ಲೂರು ಶ್ರೀಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ನಂತರ ಶ್ರೀಕೃಷ್ಣಮಠಕ್ಕೆ,ಭಾರತ ಸರಕಾರದ ಹಣಕಾಸು ಮಂತ್ರಿಗಳಾದ ನಿರ್ಮಲಾ ಸೀತಾರಾಮನ್ ರವರು ಆಗಮಿಸಿ ದೇವರ ದರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.