Connect with us

KARNATAKA

NITK ಪ್ರೊಫೆಸರ್ ಹೇಮಂತ್ ಕುಮಾರ್ ಗೆ ‘ಪ್ರೊ. ಸತೀಶ್ ಧವನ್ ಯಂಗ್ ಎಂಜಿನಿಯರ್’ ಪ್ರಶಸ್ತಿ

ಸುರತ್ಕಲ್ :  ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NITK ) ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ.ಹೇಮಂತ ಕುಮಾರ್ ಅವರಿಗೆ 2022ನೇ ಸಾಲಿನ ಎಂಜಿನಿಯರಿಂಗ್ ವಿಜ್ಞಾನ ಕ್ಷೇತ್ರದಲ್ಲಿ ಪ್ರೊ.ಸತೀಶ್ ಧವನ್ ಯಂಗ್ ಎಂಜಿನಿಯರ್ಸ್ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕರ್ನಾಟಕ ಸರ್ಕಾರವು ಸ್ಥಾಪಿಸಿದ ಈ ಪ್ರಶಸ್ತಿಯು ಎಂಜಿನಿಯರಿಂಗ್ ವಿಜ್ಞಾನ ಕ್ಷೇತ್ರದಲ್ಲಿನ ಅತ್ಯುತ್ತಮ ಕೊಡುಗೆಗಳನ್ನು ಗುರುತಿಸುತ್ತದೆ.ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಭಾರತ ರತ್ನ  ಸಿ.ಎನ್.ಆರ್.ರಾವ್ ಅವರ ಗೌರವಾನ್ವಿತ ಉಪಸ್ಥಿತಿಯಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಸೆಪ್ಟೆಂಬರ್ 26, 2024 ರಂದು ಬೆಂಗಳೂರಿನ ಜೆ.ಎನ್.ಟಾಟಾ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಗೌರವಾನ್ವಿತ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ  ಎನ್.ಎಸ್.ಬೋಸರಾಜು, ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ನಿರ್ದೇಶಕ ಪ್ರೊ.ಗೋವಿಂದನ್ ರಂಗರಾಜನ್, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಶ್ರೀಮತಿ ಏಕ್ರೂಪ್ ಕೌರ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ಎಂಜಿನಿಯರಿಂಗ್ ಮತ್ತು ಭೂ ವಿಜ್ಞಾನದಲ್ಲಿ ಅತ್ಯುತ್ತಮ ಕೊಡುಗೆ ನೀಡಿದ 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಎಂಜಿನಿಯರ್ ಗಳು ಮತ್ತು ವಿಜ್ಞಾನಿಗಳನ್ನು ಪ್ರೋತ್ಸಾಹಿಸಲು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸ್ಥಾಪಿಸಿದ ಪ್ರಶಸ್ತಿಯು ₹ 1,00,000 ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.ಪ್ರಶಸ್ತಿಗೆ ಪ್ರತಿಕ್ರಿಯಿಸಿದ ಪ್ರೊ.ಹೇಮಂತ ಕುಮಾರ್ ಅವರು ತಮ್ಮ ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಮತ್ತು ಎನ್ ಐಟಿಕೆ ಸಮುದಾಯದ ಬೆಂಬಲಕ್ಕಾಗಿ ಕೃತಜ್ಞತೆ ಸಲ್ಲಿಸಿದರು. ತಮ್ಮ ಸಂಶೋಧನಾ ಪ್ರಯತ್ನಗಳನ್ನು ಪೋಷಿಸುವಲ್ಲಿ ಧನಸಹಾಯ ಸಂಸ್ಥೆಗಳು ಮತ್ತು ಸಹಯೋಗಿಗಳ ಪಾತ್ರಕ್ಕೂ ಅವರು ಧನ್ಯವಾದ ಅರ್ಪಿಸಿದರು. ಎನ್ಐಟಿಕೆ ನಿರ್ದೇಶಕ ಪ್ರೊ.ಬಿ.ರವಿ ಅವರು ಪ್ರೊ.ಹೇಮಂತಕುಮಾರ್ ಅವರ ಗಮನಾರ್ಹ ಸಾಧನೆಯನ್ನು ಅಭಿನಂದಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *