Connect with us

LATEST NEWS

ಆಗುಂಬೆ ಘಾಟಿ ವಾಹನ ಸಂಚಾರ ನಿಷೇಧ : ಆದೇಶ ಹಿಂತೆಗೆತ

ಆಗುಂಬೆ ಘಾಟಿ ವಾಹನ ಸಂಚಾರ ನಿಷೇಧ : ಆದೇಶ ಹಿಂತೆಗೆತ

ಉಡುಪಿ, ಮಾರ್ಚ್ 20 : ಆಗುಂಬೆ ಘಾಟಿ ವಾಹನ ಸಂಚಾರ ನಿಷೇಧ ಆದೇಶವನ್ನು ಉಡುಪಿ ಜಿಲ್ಲಾಧಿಕಾರಿ ಹಿಂಪಡೆದಿದ್ದಾರೆ. ಈ ಹಿಂದೆ ಮಾರ್ಚ್ 19 ರಿಂದ 30 ದಿನಗಳ ಕಾಲ ನಿಷೇಧ ಹೇರಿ ಆದೇಶಿಸಲಾಗಿತ್ತು.

ಕಳೆದ ಬಾರಿಯ ಮಹಾಮಳೆಗೆ ಆಗುಂಬೆ ಘಾಟಿ ರಸ್ತೆಯ ಕೆಲವು ಪ್ರದೇಶಗಳಲ್ಲಿ ಭೂ ಕುಸಿತ ಉಂಟಾಗಿ ರಸ್ತೆಯ ಕೆಲವು ಭಾಗ ಸಂಪೂರ್ಣ ಹಾಳಾಗಿತ್ತು. ಈ ಹಿನ್ನಲೆಯಲ್ಲಿ ರಕ್ಷಣಾ ತಡೆಗೋಡೆಗಳ ಮರು ನಿರ್ಮಾಣಕ್ಕೆ ಆಗುಂಬೆ ಘಾಟ್ ರಸ್ತೆಯಲ್ಲಿ ವಾಹನ ನಿರ್ಬಂಧಿಸಲಾಗುವುದು ಎಂದು ಈ ಹಿಂದೆ ಆದೇಶಿಸಲಾಗಿತ್ತು.

ಆದರೆ ಕಾರ್ಕಳ, ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ರಕ್ಷಣಾ ತಡೆಗೋಡೆಗಳ ಮರು ನಿರ್ಮಾಣ ಹಾಗೂ ದುರಸ್ಥಿ ಕಾರ್ಯ ಆರಂಭಿಸಲು ಅರಣ್ಯ ಇಲಾಖೆಯ ಮೇಲಾಧಿಕಾರಿಗಳಿಂದ ಸೂಕ್ತ ನಿರ್ದೇಶನದ ಅನುಮತಿ ಪಡೆಯುವುದಾಗಿ ತಿಳಿಸಿರುವುದರಿಂದ ಅನುಮತಿ ದೊರಕುವವರೆಗೂ ಸದ್ರಿ ರಸ್ತೆಯಲ್ಲಿ ವಾಹನಗಳ ಸಂಚಾರ ನಿಷೇಧಿಸಿ ಹೊರಡಿಸಿದ್ದ ಆದೇಶವನ್ನು ಹಿಂಪಡೆದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮುಂದಿನ ಆದೇಶದ ವರೆಗೂ ವಾಹನ ಸಂಚಾರಕ್ಕೆ ಮುಕ್ತಗೊಳಿಸಿ ಆದೇಶ ಹೊರಡಿಸಿರುತ್ತಾರೆ.

Facebook Comments

comments