LATEST NEWS
ಉಡುಪಿ – ಮಣಿಪಾಲ ಆಸ್ಪತ್ರೆಯಲ್ಲಿ ಐಸಿಯ ಹಾಗೂ ವೆಂಟಿಲೇಟರ್ ಬೆಡ್‌ಗಳ ತೀವ್ರ ಕೊರತೆ

ಉಡುಪಿ ಎಪ್ರಿಲ್ 15: ಉಡುಪಿಯಲ್ಲಿ ಕೊರೊನಾ ಎರಡನೇ ಅಲೆ ಏರಿಕೆ ಹಿನ್ನಲೆ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಐಸಿಯು ಬೆಡ್‌ಗಳ ಅವಶ್ಯಕತೆ ಹೆಚ್ಚುತ್ತಿದ್ದು, ಸಧ್ಯ ಐಸಿಯ ಹಾಗೂ ವೆಂಟಿಲೇಟರ್ ಬೆಡ್‌ಗಳ ತೀವ್ರ ಕೊರತೆ ಉಂಟಾಗಿದೆ.
ಇನ್ನು ರೋಗಿಗಳನ್ನು ಆಸ್ಪತ್ರೆಗೆ ಕರೆತರುವ ಮೊದಲು ಐಸಿಯು ಹಾಗೂ ವೆಂಟಿಲೇಟರ್ ಹಾಸಿಗೆಗಳು ಲಭ್ಯವಿರುವ ಬಗ್ಗೆ ದೃಢೀಕರಿಸಿಕೊಂಡು ಬರಬೇಕು ಎಂದು ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.

ರೋಗಿಗಳಿಗೆ ಅನಾನುಕೂಲತೆ ತಪ್ಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎಲ್ಲ ಆಸ್ಪತ್ರೆಗಳು, ನರ್ಸಿಂಗ್ ಹೋಂ, ರೋಗಿಗಳು, ಅಂಬುಲೆನ್ಸ್‌ಗಳು ಹಾಗೂ ಸೇವಾ ಪೂರೈಕೆದಾರರು ಕೆಎಂಸಿಗೆ ಬರುವ ಮುನ್ನ 9686692603 ನಂಬರ್‌ಗೆ ಕರೆಮಾಡಿ ಮಾಹಿತಿ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.