Connect with us

    LATEST NEWS

    ಕಾಗೆಗಳ ಮರಣೋತ್ತರ ಪರೀಕ್ಷೆ ವರದಿ..ಹಕ್ಕಿಜ್ವರದ ಆತಂಕವಿಲ್ಲ

    ಮಂಗಳೂರು ಜನವರಿ 8: ಮಂಗಳೂರಿನಲ್ಲಿ ಭಾರಿ ಆತಂಕಕ್ಕೆ ಕಾರಣವಾಗಿದ್ದ ಉಳ್ಳಾಲದ ಮಂಜನಾಡಿಯಲ್ಲಿ ಸತ್ತು ಬಿದ್ದಿದ್ದ ಕಾಗೆಗಳ ಮರಣೋತ್ತರ ಪರೀಕ್ಷಾ ವರದಿ ಲಭ್ಯವಾಗಿದ್ದು, ಹಕ್ಕಿ ಜ್ವರವಿಲ್ಲ ಎಂದು ದೃಢಪಟ್ಟಿದೆ.

    ದಕ್ಷಿಣಕನ್ನಡ ಜಿಲ್ಲೆಯ ಪಕ್ಕದ ರಾಜ್ಯ ಕೇರಳದಲ್ಲಿ ಹಕ್ಕಿಜ್ವರ ಆತಂಕ ಮನೆ ಮಾಡಿದ್ದು, ಈಗಾಗಲೇ ಕೇಂದ್ರ ತಂಡ ಕೇರಳಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದೆ. ಈ ನಡುವೆ ಮಂಗಳೂರಿನ ಮಂಜನಾಡಿ ಪರಿಸರದಲ್ಲಿ ಜನವರಿ 5ರಂದು ಕಾಗೆಗಳ ಕಳೆಬರ ಪತ್ತೆಯಾಗಿತ್ತು. ಸುಮಾರು ಐದು ಕಾಗೆಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದವು.


    ಈ ನಡುವೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಪಶುವೈದ್ಯಾಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು. ಅಲ್ಲದೆ, ಕಾಗೆಯೊಂದರ ಮೃತದೇಹವನ್ನು ಪರೀಕ್ಷೆಗಾಗಿ ಬೆಂಗಳೂರಿನ ಹೆಬ್ಬಾಳದಲ್ಲಿರುವ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಗೆ ಕಳುಹಿಸಲಾಗಿತ್ತು. ಮಂಜನಾಡಿ ಗ್ರಾಮದಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿತ್ತು. ಇದೀಗ ಪರೀಕ್ಷಾ ವರದಿ ಲಭ್ಯವಾಗಿದೆ. ಸತ್ತು ಬಿದ್ದಿರುವ ಕಾಗೆಗಳಲ್ಲಿ ಹಕ್ಕಿ ಜ್ವರದ ಲಕ್ಷಣಗಳಿಲ್ಲ ಎಂದು ದೃಢವಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಅವರು ಮಾಹಿತಿ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply