Connect with us

    LATEST NEWS

    ಭಾರತ್ ಬಂದ್ ಗೆ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ

    ಭಾರತ್ ಬಂದ್ ಗೆ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ

    ಮಂಗಳೂರು ಜನವರಿ 8:ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಬುಧವಾರದ ಸಾರ್ವತ್ರಿಕ ಮುಷ್ಕರಕ್ಕೆ ಕರಾವಳಿಯಲ್ಲಿ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ದಕ್ಷಿಣಕನ್ನಡ, ಉಡುಪಿ ಜಿಲ್ಲಾದ್ಯಂತ ಮುಷ್ಕರಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನಜೀವನ ಸಾಮಾನ್ಯ ರೀತಿಯಲ್ಲಿದೆ. ಎಂದಿನಂತೆ ವಾಹನ ಸಂಚಾರವಿದ್ದು, ಅಂಗಡಿ ಮುಂಗಟ್ಟುಗಳು, ಹೋಟೆಲ್‌ಗಳು ತೆರೆದಿವೆ. ಶಾಲಾ ಕಾಲೇಜುಗಳು, ಸರ್ಕಾರಿ ಕಛೇರಿಗಳು, ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.ಕೇವಲ ವಿವಿಧ ಕಾರ್ಮಿಕ ಸಂಘಟನೆಗಳಿಂದ ಮಾತ್ರ ಮುಷ್ಕರಕ್ಕೆ ಬೆಂಬಲ ಸಿಕ್ಕಿದೆ. ಖಾಸಗಿ ಬಸ್ ಮಾಲಕರು ಮುಷ್ಕರಕ್ಕೆ ಬೆಂಬಲ ಸೂಚಿಸಿಲ್ಲ. ಹೀಗಾಗಿ ಮಂಗಳೂರಿನಲ್ಲಿ ಖಾಸಗಿ ಬಸ್ ಸಂಚಾರ ಎಂದಿನಂತೆ ಇದೆ.

    ಕೇರಳದಲ್ಲಿ ಸಂಪೂರ್ಣ ಬಂದ್ ಹಿನ್ನೆಲೆ ಮಂಗಳೂರಿನಿಂದ ಕೇರಳಕ್ಕೆ ಹೋಗುವ ಬಸ್ ಸಂಚಾರ ಮಾತ್ರ ಸ್ಥಗಿತಗೊಂಡಿವೆ. ಮಂಗಳೂರು-ಕಾಸರಗೋಡು ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿವೆ. ಇನ್ನು ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply