LATEST NEWS
ಭಾರತ್ ಬಂದ್ ಗೆ ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ
ಮಂಗಳೂರು ಡಿಸೆಂಬರ್ 8: ಕೇಂದ್ರ ಸರಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ವಿವಿಧ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ಮಂಗಳೂರಿನಲ್ಲಿ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಿಗ್ಗೆಯಿಂದಲೇ ವಾಹನ ಸಂಚಾರ ಎಂದಿನಂತೆ ಇದ್ದು, ಈ ಬಂದ್ ಬಿಸಿ ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚಿನ ಪರಿಣಾಮ ಬೀರಿಲ್ಲ.
ಬೆಳಿಗ್ಗೆಯಿಂದಲೇ ಎಂದಿನಂತೆ ಸರ್ಕಾರಿ ಮತ್ತು ಖಾಸಗಿ ಬಸ್ ಸಂಚಾರ ಆರಂಭಿಸಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಸೇವೆಯೂ ಆರಂಭವಾಗಿದೆ. ಜಿಲ್ಲೆಯಲ್ಲಿ ಜನಜೀವನ ಎಂದಿನಂತೆ ಇದ್ದು, ಅಂಗಡಿ ಮುಂಗಟ್ಟುಗಳು ತೆರೆದಿವೆ.
ಇನ್ನು ಜಿಲ್ಲೆಯಲ್ಲಿ ಬಂದ್‌ಗೆ ಈಗಾಗಲೇ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದೆ. ರೈತ,ದಲಿತ,ಕಾರ್ಮಿಕ,ಜನಪರ ಚಳುವಳಿಗಳ ಒಕ್ಕೂಟದಿಂದ ಬಂದ್‌ಗೆ ಸಂಪೂರ್ಣ ಬೆಂಬಲ ದೊರೆತಿದೆ. ದಕ್ಷಿಣ ಕನ್ನಡ ಮುಸ್ಲಿಂ ಒಕ್ಕೂಟದಿಂದಲೂ ಬಂದ್‌ಗೆ ಬೆಂಬಲ ದೊರೆತಿದ್ದು ಬೆಳಗ್ಗೆ 10 ಗಂಟೆಗೆ ಮಂಗಳೂರಿನ ನಂತೂರು ಸರ್ಕಲ್ ಬಳಿ ರಾಸ್ತಾ ರುಕೋ ಚಳುವಳಿ ನಡೆಸಲು ಸಂಘಟನೆ ನಿರ್ಧರಿಸಿದೆ.