LATEST NEWS
ದಕ್ಷಿಣಕನ್ನಡ ಜಿಲ್ಲೆಗೆ ತಟ್ಟದ ಕರ್ನಾಟಕ್ ಬಂದ್ ಎಫೆಕ್ಟ್

ದಕ್ಷಿಣಕನ್ನಡ ಜಿಲ್ಲೆಗೆ ತಟ್ಟದ ಕರ್ನಾಟಕ್ ಬಂದ್ ಎಫೆಕ್ಟ್
ಮಂಗಳೂರು ಫೆ.13: ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಒತ್ತಾಯಿಸಿ ಇಂದು ಕರ್ನಾಟಕ ಬಂದ್‍ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದು , ಕರಾವಳಿಯಲ್ಲಿ ಬಂದ್ ಯಾವುದೇ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಜಿಲ್ಲೆಯಲ್ಲಿ ಕನ್ನಡಪರ ಸಂಘಟನೆಗಳು ಅಷ್ಟಾಗಿ ಪ್ರಬಲವಾಗಿರದ ಹಿನ್ನಲೆಯಲ್ಲಿ ಜಿಲ್ಲೆಗೆ ಯಾವುದೇ ರೀತಿಯ ಎಪೆಕ್ಟ್ ಆಗಿಲ್ಲ.
ಜಿಲ್ಲೆಯಲ್ಲಿ ಯಾವುದೇ ಬಂದ್ ಇಲ್ಲದೆ ಜನಜೀವನ ಸಾಮಾನ್ಯ ಸ್ಥಿತಿಯಲ್ಲಿದೆ. ಖಾಸಗಿ ಬಸ್ ಸೇರಿದಂತೆ ಎಲ್ಲಾ ರೀತಿಯ ವಾಹನಗಳು ಸಂಚರಿಸುತ್ತಿದ್ದು, ಅಂಗಡಿಗಳು ಎಂದಿನಂತೆ ತೆರೆದಿವೆ. ಶಾಲಾ ಕಾಲೇಜುಗಳು ಎಂದಿನಂತೆ ತೆರೆದಿವೆ.

ಈ ನಡುವೆ ಇಂದು ಮುಂಜಾನೆ ತಿರುಪತಿಯಿಂದ ಮಂಗಳೂರಿಗೆ ಬರುತ್ತಿದ್ದ ಆಂಧ್ರಪ್ರದೇಶದ ಪ್ರವಾಸೋದ್ಯಮ ಇಲಾಖೆಯ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದರಿಂದ ಬಸ್ನ ಕಿಟಕಿ ಗಾಜು ಪುಡಿಯಾಗಿದೆ. ಬಸ್ನಲ್ಲಿ 30 ಮಂದಿ ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾರಿಗೂ ಗಾಯವಾಗಿಲ್ಲ ಎಂದು ತಿಳಿದುಬಂದಿದೆ.