LATEST NEWS
ಕರ್ನಾಟಕ ಬಂದ್ ಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿರಸ ಪ್ರತಿಕ್ರಿಯೆ
ಕರ್ನಾಟಕ ಬಂದ್ ಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿರಸ ಪ್ರತಿಕ್ರಿಯೆ
ಮಂಗಳೂರು ಮೇ 28: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ 24 ಗಂಟೆಯೊಳಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿಪ್ರಣಾಳಿಕೆಯಲ್ಲಿ ಘೋಷಿಸಿದ್ದ ಎಚ್.ಡಿ.ಕುಮಾರಸ್ವಾಮಿ ಈಗ ಮೀನಮೇಷ ಎಣಿಸುತ್ತಿರುವುದನ್ನು ವಿರೋಧಿಸಿ ಬಿಜೆಪಿ ಕರೆ ನೀಡಿದ್ದ ಕರ್ನಾಟಕ ಬಂದ್ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಳಿಗ್ಗೆಯಿಂದಲೇ ಜಿಲ್ಲೆಯಾದ್ಯಂತ ಖಾಸಗಿ ಬಸ್ ಸಹಿತ ಆಟೋ ರಿಕ್ಷಾ ವಾಹನಗಳ ಸಂಚಾರ ಎಂದಿನಂತೆ ಇದೆ. ಅಂಗಡಿ ಮುಂಗಟ್ಟುಗಳು ಎಂದಿನಂತೆ ಬಾಗಿಲು ತೆರೆದಿವೆ. ಶಾಲಾ ಶೈಕ್ಷಣಿಕ ವರ್ಷ ಇಂದಿನಿಂದ ಪ್ರಾರಂಭವಾಗಲಿರುವ ಹಿನ್ನಲೆಯಲ್ಲಿ ಶಾಲೆಗಳು ತೆರಿದಿವೆ.
ಬಿಜೆಪಿ ಕರೆ ನೀಡಿರುವ ಬಂದ್ ಗೆ ದಕ್ಷಿಣಕನ್ನಡ ಜಿಲ್ಲೆಯ ಯಾವ ಸಂಘಟನೆಗಳೂ ಬೆಂಬಲ ಸೂಚಿಸಿಲ್ಲ.
ಪುತ್ತೂರಿನಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪುತ್ತೂರಿನ ಕಡಬ, ಕೋಡಿಂಬಾಳ ಪೇಟೆ ಸಂಪೂರ್ಣ ಬಂದ್, ಅಂಗಡಿ-ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ವ್ಯಾಪರಸ್ಥರು ಮುಚ್ಚಿ ಬಂದ್ ಗೆ ಬೆಂಬಲ ನೀಡಿದ್ದಾರೆ.