Connect with us

    LATEST NEWS

    ನನಗೆ ಈವರೆಗೆ ಯಾರೂ ಕರೆ ಮಾಡಿಲ್ಲ – ಜಗದೀಶ್ ಶೆಟ್ಟರ್

    ಉಡುಪಿ ಅಗಸ್ಟ್ 26: ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೇಸ್ ಮುಖಂಡ ಜಗದೀಶ್ ಶೆಟ್ಟರ್ ಗೆ ಕರೆ ಮಾಡಿದ್ದಾರೆ ಎಂಬ ಸುದ್ದಿ ಬಗ್ಗೆ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದು, ಇಲ್ಲಿಯವರೆಗೆ ನನಗೆ ಯಾರೂ ಕರೆ ಮಾಡಿಲ್ಲ ಎಂದಿದ್ದಾರೆ,


    ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಅಮಿತ್ ಶಾ ಆಗಲಿ ಮತ್ತೊಬ್ಬರು ಯಾರು ಈವರೆಗೆ ಕರೆ ಮಾಡಿಲ್ಲ, ನನಗೆ ಬಿಜೆಪಿ ಹೈಕಮಾಂಡ್ ನಿಂದ ಯಾವುದೇ ಕರೆ ಬಂದಿಲ್ಲ. ಕರೆ ಬಾರದೆ ಈ ಎಲ್ಲಾ ಚರ್ಚೆಗಳು ಯಾಕೆ. ಕರೆ ಮಾಡಿದರೆ ನಾನು ಮಾಧ್ಯಮಗಳಿಗೆ ತಿಳಿಸುತ್ತೇನೆ, ಕರೆ ಬರುವ ಮೊದಲು ಯಾಕೆ ಚರ್ಚೆ ಮಾಡಬೇಕು ಎಂದರು. ಇನ್ನು ಕರ್ನಾಟಕ ಬಿಜೆಪಿ ಲೀಡರ್ ಲೆಸ್ ಆಗಿದೆ. ಇನ್ನೂ ರಾಜ್ಯಾಧ್ಯಕ್ಷರನ್ನು ರಿಪ್ಲೇಸ್ ಮಾಡಲು ಸಾಧ್ಯವಾಗಿಲ್ಲ. ಬಿಜೆಪಿಗೆ ಒಬ್ಬ ನಾಯಕ ಎಂಬುದು ಇಲ್ಲ, ಬೇರೆ ಬೇರೆ ಕಡೆ ಕಾಂಗ್ರೆಸ್ ನಾಯಕರನ್ನು ಬಿಜೆಪಿಯವರು ಭೇಟಿಯಾಗುತ್ತಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಇನ್ನೂ ದಯನೀಯ ಪರಿಸ್ಥಿತಿಗೆ ಹೋಗುತ್ತದೆ. ಬಿಜೆಪಿ ಒಳಗೆ ಸಾಕಷ್ಟು ಜನ ನೊಂದಿದ್ದಾರೆ ಸಂಕಟಪಡುತ್ತಿದ್ದಾರೆ. ಬಿಜೆಪಿಯನ್ನು ಬಿಟ್ಟು ಹೊರಗೆ ಬರಲು ಬಹಳಷ್ಟು ಜನ ತಯಾರಾಗಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಬಾರಿಸಲಿದೆ, ಕಾಂಗ್ರೆಸ್ 12 ರಿಂದ 15 ಸ್ಥಾನ ಗೆಲ್ಲುವುದು ನಿಶ್ಚಿತ ಎಂದರು, ಸದ್ಯದ ಪರಿಸ್ಥಿತಿ ನೋಡಿದ್ರೆ 15ಕ್ಕಿಂತ ಹೆಚ್ಚು ಸ್ಥಾನ ಬಂದರೂ ಆಶ್ಚರ್ಯ ಪಡಬೇಕಾಗಿಲ್ಲ. ಕಾಂಗ್ರೆಸ್ ಸೇರಲು ರಾಜ್ಯದ ಎಲ್ಲಾ ತಾಲೂಕು ಜಿಲ್ಲೆಯ ಜನ ಉತ್ಸುಕರಾಗಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply